ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗೋವಾದಿಂದ ಕಾರವಾರ ನಡುವೆ ಇದ್ದ ಕಾಳಿ ಸೇತುವೆ ಕುಸಿದು ಲಾರಿಯೊಂದು ನದಿಯ ಪಾಲು.!

08:08 AM Aug 07, 2024 IST | BC Suddi
Advertisement

ಕಾರವಾರ: ರಾತ್ರಿ 1 ಗಂಟೆ ವೇಳೆಗೆ ಕಾಳಿ ನದಿಯ ಹಳೆಯ ಸೇತುವೆಯು ಮೂರು ಕಡೆಗಳಲ್ಲಿ ಏಕಾಏಕಿ ಮುರಿದು ಬಿದ್ದಿತ್ತು. ಸೇತುವೆ ಮೇಲೆ ಸಾಗುತ್ತಿದ್ದ ಗೋವಾದಿಂದ ಕಾರವಾರ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿದೆ. ಲಾರಿ ಚಾಲಕ ಮುರುಗನ್ ಅವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

Advertisement

ಇಲ್ಲಿನ ಕೋಡಿಬಾಗದಲ್ಲಿರುವ ಕಾಳಿ ಸೇತುವೆಯು ಮಂಗಳವಾರ ತಡರಾತ್ರಿ ಕುಸಿದು ಬಿದ್ದಿದ್ದು, ಲಾರಿಯೊಂದು ನದಿ ಪಾಲಾಗಿದೆ. ಈ ಸೇತುವೆಯನ್ನು 1983ರಲ್ಲಿ ನಿರ್ಮಿಸಲಾಗಿತ್ತು. 2009ರಲ್ಲಿ ಸೇತುವೆಯ ಸಂಪೂರ್ಣ ದುರಸ್ತಿಗೆ ಪ್ರಯತ್ನಿಸಲಾಗಿತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಭಾಗಶಃ ಮಾತ್ರ ದುರಸ್ತಿ ನಡೆಸಲಾಗಿತ್ತು.

2018ರಲ್ಲಿ ಇದೇ ಸೇತುವೆ ಪಕ್ಕದಲ್ಲಿ ಇನ್ನೊಂದು ಸೇತುವೆಯನ್ನು ನಿರ್ಮಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಸದ್ಯ ಹೊಸ ಸೇತುವೆಯ ಮೇಲೆ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚಿಸಿದ್ದಾರೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರವಾರದಿಂದ ಗೋವಾ ಕಡೆಗೆ ವಾಹನ ಸಂಚಾರ ಸ್ಥಗಿತಗೊಂಡಿದೆ.

 

Tags :
ಗೋವಾದಿಂದ ಕಾರವಾರ ನಡುವೆ ಇದ್ದ ಕಾಳಿ ಸೇತುವೆ ಕುಸಿದು ಲಾರಿಯೊಂದು ನದಿಯ ಪಾಲು.!
Advertisement
Next Article