For the best experience, open
https://m.bcsuddi.com
on your mobile browser.
Advertisement

ಗೌತಮ್ ಗಂಭೀರ್ ಟೀಮ್ ಇಂಡಿಯಾ ಕೋಚ್ ಆಗೋದು ಬಹುತೇಕ ಖಚಿತ

02:01 PM May 29, 2024 IST | Bcsuddi
ಗೌತಮ್ ಗಂಭೀರ್ ಟೀಮ್ ಇಂಡಿಯಾ ಕೋಚ್ ಆಗೋದು ಬಹುತೇಕ ಖಚಿತ
Advertisement

ಟೀಮ್ ಇಂಡಿಯಾ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಈಗ ಮುಖ್ಯ ಕೋಚ್ ಆಗೋದು ಬಹುತೇಕ ಖಚಿತವಾಗಿದೆ. ಐಪಿಎಲ್‌ನ ನೈಟ್ ರೈಡರ್ಸ್ ತಂಡಕ್ಕೆ ಕೋಚ್ ಆದ ಮೊದಲ ವರ್ಷವೇ ತಂಡ ಐಪಿಎಲ್ ಟ್ರೋಫಿಯನ್ನು ಗೆದ್ದಿದೆ. ಇದರ ಬೆನ್ನಲ್ಲೇ ಗಂಭೀರ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗ್ತಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದ್ರಾವಿಡ್ ನಂತರ ಗೌತಮ್ ಗಂಭೀರ್ ತಂಡದ ಕೋಚ್ ಆಗಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಗೌತಮ್ ಗಂಭೀರವರನ್ನು ಕೋಚ್ ಆಗಿ ಆಯ್ಕೆ ಮಾಡಿಕೊಳ್ಳುವ ಕುರಿತು ಸುಳಿವು ನೀಡಿದ್ದರು. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನ ಹೊಂದಿರುವುದು ಬಹಳ ಮುಖ್ಯ. ಹೀಗಾಗಿಯೇ ಇಂತಹ ವ್ಯಕ್ತಿಯನ್ನು ಕೋಚ್ ಆಗಿ ನೇಮಕ ಮಾಡಲು ಬಯಸಿದ್ದೇವೆ ಎಂದು ಹೇಳಿದ್ದರು. ಅಲ್ಲದೇ, ಶಾ ಹಾಗೂ ಗೌತಮ್ ಗಂಭೀರ್ ಚರ್ಚೆ ನಡೆಸುತ್ತಿರುವ ಫೋಟೋಗಳು ಕೂಡ ವೈರಲ್ ಆಗಿದ್ದವು. ಈಗ ಕೋಚ್ ಆಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Author Image

Advertisement