ಗೌರಿ ಗಣೇಶ ಹಬ್ಬದ ಪ್ರಯುಕ್ತ KSRTC 1500 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ
ಸೆಪ್ಟೆಂಬರ್ 6ರಂದು ಗೌರಿ ಹಬ್ಬ , ಸೆಪ್ಟೆಂಬರ್ 7ರಂದು ಗಣೇಶ ಚತುರ್ಥಿ ಹಾಗೂ ಸೆಪ್ಟೆಂಬರ್ 8ರಂದು ವಾರಾಂತ್ಯವಾಗಿದ್ದು, ಜನರಿಗೆ ಈ ವಾರ ಲಾಂಗ್ ವೀಕ್ ಎಂಡ್ ಸಿಕ್ಕಿದೆ. ಹಬ್ಬದ ಪ್ರಯುಕ್ತ ಹಾಗೂ ಲಾಂಗ್ ವೀಕ್ ಎಂಡ್ ಇರುವ ಕಾರಣ ಸಾಮಾನ್ಯವಾಗಿ ಜನರು ಊರುಗಳಿಗೆ ಹೋಗುವುದು ಹೆಚ್ಚು, ಅದ ಕಾರಣ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಬಾರದು ಎಂದು KSRTC ಹೆಚ್ಚುವರಿ 1500 ಬಸ್ಸುಗಳ ವ್ಯವಸ್ಥೆ ಮಾಡಿದೆ. ಅಷ್ಟೇ ಅಲ್ಲದೆ ಸೆಪ್ಟೆಂಬರ್ 8ರಂದು ರಾಜ್ಯದ ಮತ್ತು ಅಂತರಜ್ಯದ ವಿವಿಧ ಸ್ಥಳಗಳಿಂದ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ನಿಗಮ ತಿಳಿಸಿದೆ. ಇನ್ನು ಹೆಚ್ಚುವರಿ ಬಸ್ಸುಗಳ ಸಂಚಾರ ಮಾರ್ಗ ಈ ರೀತಿ ಇದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ವಿಜಯಪುರ , ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಶೃಗೆರಿ, ಹೊರನಾಡು, ದಾವಣಗೆರೆ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ನಡೆಸಲಿದೆ. ಇನ್ನು ಮೈಸೂರ್ ರಸ್ತೆ ಬಸ್ ನಿಲ್ದಾಣದಿಂದ ಮೈಸೂರ್, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆ ಬಸ್ ಸಂಚರಿಸಲಿದೆ. ತಮಿಳುನಾಡು ಮತ್ತು ಕೇರಳ ಕಡೆಗೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ತಿಶುರ್ , ಕೊಯುಕೊಡ್ ಸೇರಿದಂತೆ ವಿವಿಧ ಸ್ಥಳಗಳಿಗೆ ಶಾಂತಿನಗರದ ಬಸ್ ಸಂಚರಿಸಲಿದೆ. ಇನ್ನು ಇ-ಟಿಕೆಟ್ ಬುಕಿಂಗ್ ಗಗಿ www.ksrtc.Karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದು ಹಾಗೂ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ಹಾಗೂ ಹೋಗುವ ಮತ್ತು ಬರುವ ಪ್ರಯಾಣಿದ ಟಿಕೆಟನ್ನು ಒಟ್ಟಾಗಿ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.