ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ : ಹೊಸ ಕೃಷಿ ನವೋದ್ಯಮಗಳಿಗೆ ಆರ್ಥಿಕ ನೆರವು.!
ಚಿತ್ರದುರ್ಗ: 2023-24ನೇ ಸಾಲಿನ ಆಯವ್ಯಯದ ಕಂಡಿಕೆ-40ರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವಿನ್ಯತೆಯನ್ನು ಪ್ರೋತ್ಸಾಯಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು “ನವೋದ್ಯಮ” ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಆದೇಶಿಸಿದೆ.
ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣೀಜ್ಯೀಕರಣ ಉತ್ತೇಜಿಸುವ ಗುರಿಯೊಂದಿಗೆ ಕೃಷಿ ನವೋದ್ಯಮ ಕಾರ್ಯಕ್ರಮ ಅನುಷ್ಠಾನಗೊಳಿಸಲು ಯೋಜಿಸಲಾಗಿದ್ದು, ಯೋಜನೆಯು ಕೆಳಕಂಡ ಮೂರು ಪ್ರಮುಖ ಘಟಕಗಳನ್ನು ಒಳಗೊಂಡಿರುತ್ತದೆ.
ಹೊಸ ಕೃಷಿ ನವೋದ್ಯಮಗಳಿಗೆ (Startups at Incubation stage) ಆರ್ಥಿಕ ನೆರವು:- ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಬಿಸುವ ಹೊಸ ಕೃಷಿ ನವೋದ್ಯಮಗಳಿಗೆ ಅನುಮೋದಿತ ಯೋಜನಾ ವರದಿಯ ಶೇ 50 ರಷ್ಟು ಸಹಾಯಧನವನ್ನು (ಕನಿಷ್ಟ ರೂ. 5.00 ಲಕ್ಷದಿಂದಗರಿಷ್ಟರೂ. 20.00 ಲಕ್ಷದವರೆಗೆ) ಬ್ಯಾಂಕ್ ಸಾಲದ ಮುಖಾಂತರ (Backended subsidy) ನೀಡಲಾಗುವುದು.
ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಅಥವಾ ಮೇಲ್ದರ್ಜೆಗೇರಿಸಲು ಆರ್ಥಿಕ ನೆರವು (Scalup of Business / Expansion of Establishedstratups) ಕೃಷಿ ಕ್ಷೇತ್ರದಲ್ಲಿ ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಹಾಗೂ ಉನ್ನತೀಕರಣಕ್ಕಾಗಿಯೋಜನಾ ವರದಿಯಶೇ 50 ರಷ್ಟು ಸಹಾಯಧನವನ್ನು (ಕನಿಷ್ಟ ರೂ. 20.00 ಲಕ್ಷದಿಂದ ಗರಿಷ್ಟರೂ. 50.00 ಲಕ್ಷದವರೆಗೆ) ಬ್ಯಾಂಕ್ ಸಾಲದ ಮುಖಾಂತರ (Backended subsidy) ನೀಡಲಾಗುವುದು.
ಕೃಷಿ ನವೋದ್ಯಮಗಳ ಸಮಾಥ್ರ್ಯಾಭಿವೃದ್ಧಿ ಕಾರ್ಯಕ್ರಮ (Mentoring & Acceleration Programme) ಆಯ್ಕೆಯಾದ ನವೋದ್ಯಮಿಗಳ ಸಮಾಥ್ರ್ಯಾಭಿವೃದ್ಧಿಗೆ ಕೃಷಿ ವಿಶ್ವವಿದ್ಯಾಲಯ, ICAR, CFTRI, CSIR,C-CAMP ಹಾಗೂ ಇತರೆ ಸಂಶೋಧನಾ ಸಂಸ್ಥೆಗಳಾದ ವಿಧ್ಯುನ್ಮಾನ ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಸ್ಥಾಪಿತವಾಗಿರುವ ಕೃಷಿ ನಾವೀನ್ಯತೆಗಾಗಿ ಶ್ರೇಷ್ಟತೆಯ ಕೇಂದ್ರಗಳ ಮೂಲಕ ತರಬೇತಿಗಳನ್ನು ನೀಡಲಾಗುವುದು. ಈ ಕಾರ್ಯಕ್ರಮಕ್ಕಾಗಿ ಪ್ರತ್ಯೇಕವಾಗಿ ಅನುದಾನ ನಿಗಧಿ ಪಡಿಸಲಾಗಿದ್ದು, ಕೃಷಿ ನವೋದ್ಯಮಿಗಳಿಗೆ ತರಬೇತಿ ನೀಡುವ ಸಂಸ್ಥೆಗಳಿಗೆ ತರಬೇತಿ ಶುಲ್ಕವನ್ನು ಪಾವತಿಸಲಾಗುವುದು
ಜಿಲ್ಲೆಯ ಕೃಷಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡಿಸಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ತಮಗೂ ಹಾಗೂ ಇತರರಿಗೂ ಉದ್ಯೋಗಾವಕಾಶ ಸೃಷ್ಟಿಸಿಕೊಳ್ಳುವ ಸದಾವಕಾಶದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.