ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗ್ರಾಮ ಪಂಚಾಯಿತಿಗಳ ಕಾರ್ಯಗಳ ಮಾಹಿತಿಗಾಗಿ ಪಂಚಮಿತ್ರ ವಾಟ್ಸಪ್ ಚಾಟ್ ನಂಬರ್!

01:32 PM Mar 05, 2024 IST | Bcsuddi
Advertisement

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಎಲ್ಲಾ ಬಗೆಯ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿ ಪರಿಶೀಲನೆ ಹಾಗೂ ಗ್ರಾ.ಪಂ. ಎಲ್ಲಾ ಕುಂದುಕೊರತೆಗಳನ್ನು ದಾಖಲಿಸಿ ಪರಿಹಾರವನ್ನು ಇನ್ಮುಂದೆ ತಮ್ಮ ಮೊಬೈಲ್ ನಲ್ಲಿ ವಾಟ್ಸ್ ಅಪ್ ಚಾಟ್ ಮೂಲಕ ಪಡೆಯಲಾಗಿದೆ. ಈ ಆಧುನಿಕ ಗ್ರಾಮೀಣಾಭಿವೃದ್ದಿ ಮತ್ತು ರಾಜ್ಯ ಇಲಾಖೆಯು ಅಭಿವೃದ್ಧಿ ಪಡಿಸಿರುವ ಮಹತ್ವದ 'ಪಂಚಮಿತ್ರ' ಎಂಬ ವಾಟ್ಸ್‌ಆಯಪ್ ಚಾಟ್ ನಂಬರ್‌ (827750 6000) ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಿದರು.

Advertisement

ಬಳಿಕ ಮಾತನಾಡಿದ ಅವರು,ಸಾರ್ವ ಜನಿಕರು ತಮಗೆ ಅವಶ್ಯಕತೆ ಇರುವ ಗ್ರಾ.ಪಂ. ಗಳಲ್ಲಿ ಲಭ್ಯ ಸೇವೆಗಳಿಗೆ ಅರ್ಜಿ ಸಲ್ಲಿಸಲು, ವಿವಿಧ ಮಾಹಿತಿ, ವಿವರಗಳನ್ನು ಪಡೆಯಲುಹಲವಾರು ವೆಬ್‌ಸೈಟ್ ಮತ್ತು ಪೋರ್ಟಲ್ ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾ.ಪಂ.ಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ ಸೈಟ್ ಅಥವಾ ಪೋರ್ಟಲ್‌ಗಳು ಇರಲಿಲ್ಲ.

ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಪಂಚಮಿತ್ರ ಎಂಬ ವಿನೂನತ ವಾಟ್ಸ್‌ಆ್ಯಪ್ ಚಾಟ್ ಅನ್ನು ಅನುಷ್ಠಾನಕ್ಕೆ ತರಲಾಗಿದೆ. ಪಂಚಮಿತ್ರದ ವಾಟ್ಸ್‌ಆ್ಯಪ್ ನಂ. 8277506000 ಮೂಲಕವೇ ಇನ್ನು ಮುಂದೆ ಸಾರ್ವಜನಿಕರು ಗ್ರಾ.ಪಂ.ಗಳಗಳಲ್ಲಿ ಲಭ್ಯವಿರುವ ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ವ್ಯಾಪಾರ ಪರವಾನಗಿ ಸೇರಿದಂತೆ ಇತರೆ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು.

ಬಳಿಕ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಅದೇ ರೀತಿ ತಮ್ಮ ಗ್ರಾಂ.ಪಂ. ವ್ಯಾಪ್ತಿಯ ಬೀದಿ ದೀಪ ನಿರ್ವಹಣೆ, ಕುಡಿಯುವ ನೀರು,ರಸ್ತೆ-ಸೇತುವೆ ದುರಸ್ತಿ, ತ್ಯಾಜ್ಯ ನಿರ್ವಹಣೆ ಸಮಸ್ಯೆ, ಎಂ.ಜಿ.ಎನ್.ಆ‌ರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್ ರಾಜ್ ವಿಷಯಗಳಿಗೆ ಸಂಬಂಧಿತ 78 ವರ್ಗಗಳ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸ ಅಸ್ತಿತ್ವ ಬಹುದಾಗಿದೆ ಎಂದು ವಿವರಿಸಿದರು. ಅಲ್ಲದೆ, ಚುನಾಯಿತ ಪ್ರತಿನಿಧಿಗಳ ವಿವರಗಳು, ಅಧಿಕಾರಿ, ಸಿಬ್ಬಂದಿ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯಿತಿ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯಿತಿಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಟೆಂಡರ್‌ಗಳು, ಸೇವೆಗಳ ವಿವರಗಳು, ಸ್ವ-ಸಹಾಯ ಗುಂಪಿನ ವಿವರಗಳು,ಆರ್ ಟಿ ಐ ದಾಖಲೆಗಳು ಲಭ್ಯವಾಗಲಿವೆ ಎಂದರು.

ಸ್ವಾಧೀನ ಪ್ರಮಾಣಪತ್ರ, ರಸ್ತೆ, ಅಗೆವುದಾಕ್ಕಾಗಿ ಅನುಮತಿ, ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ನರೇಗಾ ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿವಿಕರ, ಹೊಸ/ ಅಸ್ತಿತ್ವದಲ್ಲಿರುವ ಓವರ್‌ಗೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲ ಸೌಕರ್ಯಗಳ ಅನುಮತಿ/ ನಿಯಮಿತಗೊಳಿ ಸುವಿಕೆ, ನಮೂನೆ 9/11ಎ, ನಮೂನೆ 11 ಬಿ ಸೇರಿ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಕುಂದುಕೊರತೆಗಳನ್ನು ದಾಖಲಿಸಬಹುದು.

ವಾಟ್ಸಾಪ್‌ನಲ್ಲಿ ಮಾಹಿತಿ ಹೇಗೆ?

ನಿಮ್ಮ ಮೊಬೈಲ್‌ನಲ್ಲಿ ಇಲಾಖೆಯ ವಾಟ್ಸ್ ಆ್ಯಪ್ ಚಾಟ್ ನಂಬರ್- 8277506000 ಅನ್ನು ಸೇವ್ ಮಾಡಿಕೊಂಡು ಚಾಟ್ ಆರಂಭಿಸಿದರೆ. ಮೊದಲಿಗೆ ಭಾಷೆಯ ಆಯ್ಕೆ, ನಂತರ ನಿಮ್ಮ ಹೆಸರು, ವಿಳಾಸ, ಮೊಬೈಲ್ ನಂಬರ್ ಮಾಹಿತಿ ನೀಡಿ ಲಾಗಿನ್ ಆಗಬೇಕು. ನಂತರ ತಾನಾಗಿಯೇ ಕೆಲ ಆಯ್ಕೆಗಳು ಆರಂಭವಾಗುತ್ತಾ ಸಾಗುತ್ತದೆ. ಕ್ರಮ ಸಂಖ್ಯೆಗಳನ್ನು ನಮೂದಿಸುವ ಮೂಲಕ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಆಯ್ಕೆ ಮಾಡಿಕೊಂಡು ನೀವು ಬಯಸುವ ಗ್ರಾ.ಪಂಚಾಯಿತಿ ಆಯ್ಕೆ ಮಾಡಿಕೊಂಡು ಅಲ್ಲಿನ ಚುನಾಯಿತಿ ಪ್ರತಿನಿಧಿಗಳು, ಸಿಬ್ಬಂದಿಯ ಮಾಹಿತಿ ಪಡೆಯಬಹುದು.

Advertisement
Next Article