ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಕೇಸ್: 'ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ'- ಡಿಕೆಶಿ

05:00 PM May 27, 2024 IST | Bcsuddi
Advertisement

ಬೆಂಗಳೂರು: ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಚನ್ನಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಚನ್ನಗಿರಿ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಕರಣದ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರ ನಿಲುವು ಅಚಲವಾಗಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೆಶ್ವರ್ ಅವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದರು.

ಇನ್ನು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಕುರಿತು ಮಾತನಾಡಿದ ಅವರು, ತನಿಖೆ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ದೇಶದ ಒಳಗಾಗದರೆ ರಾಜ್ಯ ಸರ್ಕಾರ ಏನುಬೇಕಾದರೂ ಕ್ರಮಕೈಗೊಳ್ಳಬಹುದು. ವಿದೇಶದ ವಿಚಾರಕ್ಕೆ ಬಂದಾಗ ಕೇಂದ್ರ ಸರ್ಕಾರ ಹೆಚ್ಚು ಕಾರ್ಯ ಪ್ರವೃತ್ತವಾಗಬೇಕು. ನಮ್ಮ ಗೃಹಸಚಿವರು ಈ ಪ್ರಕರಣ ತನಿಖೆಯನ್ನು ನಿಭಾಯಿಸುತ್ತಿದ್ದಾರೆ ಎಂದು ಹೇಳಿದರು.

 

Advertisement
Next Article