ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚಾಮುಂಡೇಶ್ವರಿ ಮಾತೆಗೂ ಪ್ರತಿ ತಿಂಗಳೂ ಗೃಹಲಕ್ಷ್ಮೀಯ 2000 ರೂ. ಅರ್ಪಿಸಲು ಸರ್ಕಾರ ನಿರ್ಧಾರ

10:36 AM Nov 17, 2023 IST | Bcsuddi
Advertisement

ಮೈಸೂರು: ಕಾಂಗ್ರೆಸ್ ನೇತೃತದ ರಾಜ್ಯ ಸರ್ಕಾರವೂ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಚಾಮುಂಡೇಶ್ವರಿಗೆ ಅರ್ಪಿಸಿದ್ದು, ಪ್ರತಿ ತಿಂಗಳು ದೇವಸ್ಥಾನಕ್ಕೆ 2 ಸಾವಿರ ರೂ. ನೀಡಲು ನಿರ್ಧರಿಸಿದೆ.

Advertisement

ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನ ಚಾಮುಂಡೇಶ್ವರಿಗೆ ದೇವಸ್ಥಾನದಲ್ಲಿ ಚಾಲನೆ ನೀಡಲಾಗಿತ್ತು. ಹೀಗಾಗಿ ಚಾಮುಂಡೇಶ್ವರಿಗೆ ಈ ಯೋಜನೆಯನ್ನು ಅರ್ಪಿಸಲಾಗಿದೆ.

ಚಾಮುಂಡೇಶ್ವರಿ ಗೃಹಲಕ್ಷ್ಮೀಯ 2000 ರೂ. ಅರ್ಪಿಸುವ ವಿಚಾರದ ಕುರಿತಂತೆ ದಿನೇಶ್ ಗೂಳಿಗೌಡ ಬರೆದ ಪತ್ರಕ್ಕೆ ಕೂಡಲೇ ಸ್ಪಂದಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಜನರಿಗೆ ಅತ್ಯಂತ ಉಪಕಾರಿಯಾಗಿದ್ದು. ಚುನಾವಣೆಗೂ ಪೂರ್ವ ಕಾಂಗ್ರೆಸ್ ಪಕ್ಷದ ವತಿಯಿಂದ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ಪಕ್ಷದ ಐದು ಗ್ಯಾರಂಟಿ ಕಾರ್ಡ್​​ ಅನ್ನು ಇಟ್ಟು ದೇವಿಯ ಬಳಿ ಶಕ್ತಿ ಕೊಡು ಎಂದು ಕೋರಿಕೆಯನ್ನಿಡಲಾಗಿತ್ತು. ಆ ಸಂದರ್ಭದಲ್ಲಿ ಹರಕೆಯನ್ನು ನಾಡದೇವತೆ ಬಳಿ ಮಾಡಿಕೊಳ್ಳಲಾಗಿತ್ತು. ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಈಡೇರಿಸುವ ವಾಗ್ದಾನವನ್ನು ಮಾಡಲಾಗಿತ್ತು ಎಂದು ದಿನೇಶ್ ಗೂಳಿಗೌಡ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Advertisement
Next Article