For the best experience, open
https://m.bcsuddi.com
on your mobile browser.
Advertisement

ಚಾರ್ಜ್‌ಶೀಟ್‌ನಲ್ಲಿ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ದರ್ಶನ್‌ ಕೋರ್ಟ್‌ ಮೊರೆ

01:25 PM Sep 09, 2024 IST | BC Suddi
ಚಾರ್ಜ್‌ಶೀಟ್‌ನಲ್ಲಿ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ದರ್ಶನ್‌ ಕೋರ್ಟ್‌ ಮೊರೆ
Advertisement

ಬೆಂಗಳೂರು: ಚಾರ್ಜ್‌ಶೀಟ್‌ನಲ್ಲಿ ಇರುವ ಗೌಪ್ಯ ಮಾಹಿತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೋರಿ ದರ್ಶನ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಸಾವಿರ ಪುಟಗಳಿರುವ ದೋಷಾರೋಪ ಪಟ್ಟಿಯನ್ನು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್‌ ಪರ ವಕೀಲರು ರಿಟ್‌ ಅರ್ಜಿ ಸಲ್ಲಿಸಿದ್ದಾರೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಬಗ್ಗೆ ಚಾರ್ಜ್‌ಶೀಟ್‌ನಲ್ಲಿದೆ.

Advertisement

Author Image

Advertisement