For the best experience, open
https://m.bcsuddi.com
on your mobile browser.
Advertisement

ಚಾರ್ಮಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ- ನಿತಿನ್ ಗಡ್ಕರಿ

09:44 AM Jan 20, 2024 IST | Bcsuddi
ಚಾರ್ಮಡಿ ಘಾಟ್ ವಿಸ್ತರಣೆಗೆ 343 73 ಕೋಟಿ ರೂ  ಬಿಡುಗಡೆ  ನಿತಿನ್ ಗಡ್ಕರಿ
Advertisement

ನವದೆಹಲಿ: ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರೆತಿದೆ.

ಚಾರ್ಮಾಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ನೀಡಲಾಗಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ’ಇಪಿಸಿ ಮಾದರಿಯಲ್ಲಿ 10.8 ಕಿ.ಮೀ ರಸ್ತೆಯ ವಿಸ್ತರಣೆ ಮಾಡಲಾಗುತ್ತದೆ. ಈ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ. ಚಾರ್ಮಡಿ ಘಾಟ್ ನ ಗುಡ್ಡಗಾಡು ಪ್ರದೇಶದಲ್ಲಿ ಕೈಗೆತ್ತಿಕೊಳ್ಳುವಂತಹ ಉಪಕ್ರಮವು ಸವಾಲಿನದ್ದಾಗಿದೆ. ಇದರೊಂದಿದೆ ಸಂಚಾರ ವ್ಯವಸ್ಥೆ ಗಣನೀಯವಾಗಿ ಸುಧಾರಣೆಯಾಗಲಿದೆ’ ಎಂದು ಬರೆದುಕೊಂಡಿದ್ದಾರೆ

Advertisement

Author Image

Advertisement