ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚಾರ್ಮಾಡಿ ಘಾಟ್‌ನಲ್ಲಿ ಭಾರಿ ಮಳೆ ಹಿನ್ನೆಲೆ ಮತ್ತೆ ಗುಡ್ಡ ಕುಸಿತ

12:39 PM Aug 22, 2024 IST | BC Suddi
Advertisement

ಚಿಕ್ಕಮಗಳೂರು : ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ವಾಹನ‌ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಧಾರಾಳ ನೀರು ಹರಿಯುತ್ತಿದೆ.

ಬೆಂಗಳೂರಿನಿಂದ ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುವ ಕಾರಣ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 

Advertisement
Next Article