For the best experience, open
https://m.bcsuddi.com
on your mobile browser.
Advertisement

'ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ '- ಅಮಿತ್ ಶಾ

02:43 PM Sep 17, 2024 IST | BC Suddi
 ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ    ಅಮಿತ್ ಶಾ
Advertisement

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಹೇಳಿದರು.

ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಅಮಿತ್ ಶಾ, ಪ್ರಸಾರ ಖಾತೆ ಸಚಿವ ಅಶ್ವಿನಿ ವೈ ಷ್ಣವ್ ಅವರೊಂದಿಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ ಎಂದರು.

ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ. 1881ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ ನಡೆಸಲಾಗುತ್ತಿದೆ. ಜನಗಣತಿಯು 2020ರ ಏಪ್ರಿಲ್ 1ರಂದೇ ಆರಂಭವಾಗಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ ಮುಂದೂಡಲಾಗಿತ್ತು ಎಂದು ಹೇಳಿದರು.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Author Image

Advertisement