ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜನರ ಮೇಲೆ ಹಾಲಿನ ಟ್ಯಾಂಕರ್: 3 ಸಾವು, ಹಲವು ಮಂದಿ ಗಂಭೀರ

12:33 PM Feb 11, 2024 IST | Bcsuddi
Advertisement

ಸಿಕ್ಕಿಂ: ವಾರತ್ಯಂದಲ್ಲಿ ನಡೆಯುತ್ತಿದ್ದ ಮೇಳದಲ್ಲಿ ಭಾಗವಹಿಸಿದ್ದ ಜನರ ಮೇಲೆ ಹಾಲಿನ ಟ್ಯಾಂಕರೊಂದು ಹರಿದಿದೆ. ಇದರ ಪರಿಣಾಮ ೩ ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು ೨೦ ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಸಿಕ್ಕಿಂನ ರಾಣಿಪೂಲ್‌ನಲ್ಲಿ ನಡೆದಿದೆ.

Advertisement

ರಾಣಿಪೂಲ್‌ನಲ್ಲಿ ಮೇಳ ನಡೆಯುತಿತ್ತು ಇದರಲ್ಲಿ ನೂರಾರು ಮಂದಿ ಭಾಗವಹಿಸಿದ್ದರು ಈ ವೇಳೆ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಎರಡು ಕಾರು ಬೈಕು ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಮೇಳದಲ್ಲಿ ನೆರೆದಿದ್ದ ಜನರ ಮೇಲೆ ಹರಿದಿದೆ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ ಇಪ್ಪತ್ತೂ ಜನರಿಗೂ ಅಧಿಕ ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಮೇಳದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಮೇಳ ನಡೆಯುತ್ತಿದ್ದ ಸಂದರ್ಭ ಅತೀ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ವೊಂದು 2 ಕಾರು ಹಾಗೂ ಬೈಕ್ ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಮೇಳದಲ್ಲಿ ನೆರೆದಿದ್ದ ಜನರ ಮೇಲೆ ಹರಿದಿದೆ ಎನ್ನಲಾಗಿದೆ.

ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರಲ್ಲಿ ಡಿಕ್ಕಿಯ ರಭಸಕ್ಕೆ ಕಾರುಗಳು ಜಾತ್ರೆಯಲ್ಲಿ ಭಾಗವಹಿಸಿದ್ದ ಜನರ ಹತ್ತಿರ ತಳ್ಳಲ್ಪಟ್ಟು ನಿಯಂತ್ರಣ ತಪ್ಪಿದ ಟ್ಯಾಂಕರ್ ಅಲ್ಲಿದ್ದ ಜನರ ಮೇಲೆ ಹರಿದಿರುವುದು ಕಾಣಬಹುದಾಗಿದೆ.

ಇನ್ನು ಮಾಹಿತಿಯ ಪ್ರಕಾರ ಹಾಲಿನ ಟ್ಯಾಂಕರ್ ಬ್ರೇಕ್ ವಿಫಲವಾಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಸ್ಥಳೀಯ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Advertisement
Next Article