For the best experience, open
https://m.bcsuddi.com
on your mobile browser.
Advertisement

ಜಮ್ಮುಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ

11:21 AM Jan 05, 2024 IST | Bcsuddi
ಜಮ್ಮುಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ
Advertisement

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳು ಕಾಶ್ಮೀರ ಜಿಲ್ಲೆಯ ಚೋಟಿಗಮ್ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಮೇರೆಗೆ ಡಿ. ೫ ಮುಂಜಾನೆ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಈ ವೇಳೆ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಈವರೆಗೆ ಯಾವುದೇ ಜೀವ ಹಾನಿಯ ಬಗ್ಗೆ ಮಾಹಿತಿ ಬಂದಿಲ್ಲ ಎಂದು ಅವರು ಮಾಹಿತಿ ಒದಗಿಸಿದ್ದಾರೆ.

Advertisement

Author Image

Advertisement