For the best experience, open
https://m.bcsuddi.com
on your mobile browser.
Advertisement

ಜಮ್ಮು & ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದು ಸರಿ: ಕೇಂದ್ರದ ನಿಲುವಿಗೆ ಸುಪ್ರೀಂ ಕೋರ್ಟ್‌ ಸಹಮತ

11:38 AM May 23, 2024 IST | Bcsuddi
ಜಮ್ಮು   ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದು ಸರಿ  ಕೇಂದ್ರದ ನಿಲುವಿಗೆ ಸುಪ್ರೀಂ ಕೋರ್ಟ್‌ ಸಹಮತ
Advertisement

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಕೇಂದ್ರ ಸರ್ಕಾರವು ಆಗಸ್ಟ್ 2019ರಲ್ಲಿ ಆರ್ಟಿಕಲ್ 370 ಅನ್ನು ರದ್ದುಗೊಳಿಸಿತ್ತು. ಈ ನಿರ್ಧಾರವನ್ನು ಎತ್ತಿಹಿಡಿಯುವ ಡಿಸೆಂಬರ್ 2023ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಈ ಸಂಬಂಧ ತನ್ನ ಚೇಂಬರ್‌ನಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದಾಖಲೆಯಲ್ಲಿ ಯಾವುದೇ ದೋಷ ಕಂಡುಬರದ ಹಿನ್ನೆಲೆ ಸುಪ್ರೀಂ ಕೋರ್ಟ್ ನಿಯಮಗಳು 2013ರ ಆದೇಶ XLVII ನಿಯಮ 1ರ ಅಡಿಯಲ್ಲಿ ಪರಿಶೀಲನೆಗೆ ಅಗತ್ಯವಿಲ್ಲ ಎಂದು ಹೇಳಿ, ಅರ್ಜಿಗಳನ್ನು ವಜಾಗೊಳಿಸಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಂತಿಮವಾಗಿ ಈ ಪ್ರದೇಶಕ್ಕೆ ರಾಜ್ಯತ್ವವನ್ನು ಪುನಃ ಸ್ಥಾಪಿಸಲಾಗುವುದು ಎಂದು ನೀಡಿದ ಭರವಸೆಯನ್ನು ದಾಖಲಿಸಿದ ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್‌ನಲ್ಲಿ ಆರ್ಟಿಕಲ್ 370 ಅನ್ನು ರದ್ದು ಮಾಡುವ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.

Advertisement

Author Image

Advertisement