ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜಮ್ಮು- ಕಾಶ್ಮೀರದಲ್ಲಿ ಉಗ್ರರಿಗೆ ನೆರವು ನೀಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

10:14 AM Dec 07, 2023 IST | Bcsuddi
Advertisement

ಶ್ರೀನಗರ: ಭಯೋತ್ಪಾದನ ಕೃತ್ಯಗಳನ್ನು ನಡೆಸಲು ಉಗ್ರರಿಗೆ ನೆರವು ನೀಡುತ್ತಿದ್ದ ಇಬ್ಬರು ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತ ಆರೋಪಿಗಳನ್ನು ಮೊಹಮ್ಮದ್ ಫಾರೂಕ್ ಮತ್ತು ಮೊಹಮ್ಮದ್ ನಜೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಬುಧಾಲ್ ಪ್ರದೇಶದ ಬೆಹ್ರೋಟ್ ಗ್ರಾಮದಲ್ಲಿ ಶೋಧ ಕಾರ್ಯ ನಡೆಸಿದಾಗ ಸಂದರ್ಭದಲ್ಲಿ ಆರೋಪಿಗಳ ಬಳಿ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ.ಆರೋಪಿಗಳು ಉಗ್ರರಿಗೆ ಮಾಹಿತಿ ನೀಡುವುದು ಸೇರಿದಂತೆ ಅನೇಕ ರೀತಿಯ ನೆರವು ನೀಡಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ ಒಂದು ಪಿಸ್ತೂಲ್, ಎರಡು ಮ್ಯಾಗ್‍ಜಿನ್, 30 ಗುಂಡುಗಳು, ಎರಡು ಹ್ಯಾಂಡ್ ಗ್ರೆನೇಡ್ ಮತ್ತು ವೈರ್ ಕಟ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Next Article