ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜಾತಿ ನಿಂದನೆ ಆರೋಪ; ಹಾಸ್ಯನಟ ಹುಲಿ ಕಾರ್ತಿಕ್‌ ವಿರುದ್ಧ ಎಫ್‌‌ಐಆರ್‌‌ ದಾಖಲು..!

12:45 PM Oct 08, 2024 IST | BC Suddi
Advertisement

ಬೆಂಗಳೂರು: ಖಾಸಗಿ ಸುದ್ದಿ ವಾಹನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಹಾಸ್ಯ ಕಾರ್ಯಕ್ರಮ ಗಿಚ್ಚಿ ಗಿಲಿಗಿಲಿ ಮೂರನೇ ಆವೃತ್ತಿಯ ವಿನ್ನರ್ ನಟ ಹುಲಿ ಕಾರ್ತಿಕ್ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ FIR ದಾಖಲಾಗಿದೆ. ಗಿಚ್ಚಿ ಗಿಲಿಗಿಲಿ ಮಾತ್ರವಲ್ಲದೇ ಸಿನಿಮಾಗಳಲ್ಲೂ ನಟಿಸಿ ಸೈ ಎನ್ನಿಸಿಕೊಂಡಿರುವ ಹುಲಿ ಕಾರ್ತಿಕ್ ಅವರು ಕೆಲ ದಿನಗಳ ಹಿಂದಷ್ಟೇ ಪ್ರಸಾರವಾದ ಖಾಸಗಿ ಸುದ್ದಿ ವಾಹಿನಿಯ ಅವಾರ್ಡ್ ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಭೋವಿ ಜನಾಂಗಕ್ಕೆ ನೋವುಂಟು ಮಾಡುವ ಹೇಳಿಕೆ ನೀಡಿದ್ದು, ಘಟನೆ ಸಂಬಂಧ ಲೋಕೇಶ್ ಎಂಬುವವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಅವಾರ್ಡ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾರ್ತಿಕ್, ಯಾವುದೋ ರೋಡಲ್ಲಿ ಬಿದ್ದಿರುವ ವಡ್ನನ ತರ ಇದ್ಯಾ. ಈ ಬೆಲ್ಟ್ ನನ್ನ ಕೈಯಲ್ಲಿ ಇದೆ ಎಂದರೆ ಅದಕ್ಕೆ ಸ್ಕ್ರಿಪ್ಟ್ ಕಾರಣ. ಸ್ಕ್ರಿಪ್ಟ್ ರೈಟರ್ ಸಂದೀಪ್ ಅವರಿಗೆ ಧನ್ಯವಾದ ಎಂದು ಹೇಳಿದ್ದರು. ಈ ಹೇಳಿಕೆಯೂ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದು, ಸ್ಕ್ರಿಪ್ಟ್ ರೈಟರ್, ಕಾರ್ಯಕ್ರಮದ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧವೂ ಜಾತಿ ನಿಂದನೆ ಆರೋಪದಡಿ ದೂರು ದಾಖಲಿಸಿದ್ದಾರೆ. ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್ ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ಧ ದೂರು ದಾಖಲಾಗಿದೆ. ಅನ್ನಪುರ್ಣೇಶ್ವರಿ ನಗರ ಪೊಲೀಸ್ ಠಾಣೆಯವರು ಈ ಸಂಬಂಧ FIR ದಾಖಲಿಸಿದ್ದಾರೆ. ಕೆಂಗೇರಿ ಉಪವಿಭಾಗ ಎಸಿಪಿಯಿಂದ ವಿಚಾರಣೆಗೆ ಹಾಜರಾಗಲು ಕಾರ್ತಿಕ್‌ಗೆ ನೋಟಿಸ್‌ ನೀಡಲಾಗಿದೆ.

Advertisement

Advertisement
Next Article