ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ- ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

04:05 PM May 28, 2024 IST | Bcsuddi
Advertisement

ನವದೆಹಲಿ: ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Advertisement

ಅರ್ಜಿಯ ಪಟ್ಟಿಯನ್ನು ವಿಚಾರಣೆಗೆ ಹೆಚ್ಚಿನ ನಿರ್ದೇಶನಕ್ಕಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಕಳುಹಿಸಿದೆ ಎಂದು ತಿಳಿಸಿದೆ.ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ವೈದ್ಯಕೀಯ ಕಾರಣಗಳಿಗಾಗಿ ಜೂನ್ 1 ರಂದು ಮುಕ್ತಾಯಗೊಳ್ಳಲಿರುವ ಅವರ ಮಧ್ಯಂತರ ಜಾಮೀನಿಗೆ ಏಳು ದಿನಗಳ ವಿಸ್ತರಣೆಯನ್ನು ಕೋರಿದ್ದರು. ಇದರ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಜೆ.ಕೆ.ಮಹೇಶ್ವರಿ ಮತ್ತು ಕೆ.ವಿ.ವಿಶ್ವನಾಥನ್ ಅವರ ರಜಾಕಾಲದ ಪೀಠ ತುರ್ತು ವಿಚಾರಣೆಗೆ ನಿರಾಕರಿಸಿತು. ಪ್ರಕರಣವನ್ನು ನಾವು ಆಲಿಸಿದ್ದೇವೆ. ಆದರೆ ಇದನ್ನು ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತರಬೇಕಾಗಿದೆ. ಈ ಹಿನ್ನೆಲೆ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಪೀಠ ತಿಳಿಸಿತು.

 

Advertisement
Next Article