ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜಿ.ಪಂ ಮಾಜಿ ಅದ್ಯಕ್ಷೆ ವೀಣಾ ಕಾಶಪ್ಪನವರಿದ್ದ ಕಾರು ಅಪಘಾತ.!

05:42 PM Nov 20, 2023 IST | Bcsuddi
Advertisement

 

Advertisement

ಬಾಗಲಕೋಟೆ ; ಜಿಪಂ ಮಾಜಿ ಅಧ್ಯಕ್ಷೆಯೂ ಆದ ಶಾಸಕ ವಿಜಯಾನಂದ ಅವರ ಪತ್ನಿ ವೀಣಾ ಕಾಶಪ್ಪನವರ್‌ ಸಂಚರಿಸುತ್ತಿದ್ದ ಕಾರು ಅಪಘಾತಕ್ಕಿಡಾಗಿ, ಅವರ ಕೈ, ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.

ಇಂದು ವಿಜಯಪುರದಿಂದ ಸಿಂದಗಿ ಕಡೆಗೆ ಹೊರಟಾಗ ಅಡ್ಡಬಂದ ಬೈಕ್ ತಪ್ಪಿಸಲು ಹೋಗಿ ರಸ್ತೆಬದಿ ಇದ್ದ ಇನ್ನೊಂದು ಕಾರಿಗೆ ಡಿಕ್ಕಿಯಾಗಿದೆ.
ಗಾಯಾಳು ವೀಣಾರನ್ನು ಮತ್ತೊಂದು ಕಾರಿನಲ್ಲಿ ವಿಜಯಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಜಯಪುರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Advertisement
Next Article