ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜುಲೈ 1ರಿಂದ ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ಬ್ರ್ಯಾಂಡ್ ಮದ್ಯ ಬೆಲೆ ಇಳಿಕೆ

01:38 PM Jun 20, 2024 IST | Bcsuddi
Advertisement

ಬೆಂಗಳೂರು: ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ.

Advertisement

ನೆರೆಹೊರೆಯ ರಾಜ್ಯಗಳಲ್ಲಿನ ಮದ್ಯದ ಬೆಲೆಗೆ ಅನುಗುಣವಾಗಿ ರಾಜ್ಯದಲ್ಲೂ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಬ್ರಾಂಡ್‌ಗಳ ಮದ್ಯದ ಬೆಲೆಯನ್ನು ಪರಿಷ್ಕರಿಸುವುದಾಗಿ ಸರಕಾರ ಕಳೆದ ಫೆಬ್ರುವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲೇ ಘೋಷಿಸಿತ್ತು. ಅದು ಇದೀಗ ಜಾರಿಯಾಗುತ್ತಿರುವುದರಿಂದ ಹೊರ ರಾಜ್ಯಗಳಲ್ಲಿನ ಮದ್ಯದ ದರಪಟ್ಟಿ ಆಧರಿಸಿ ಬೆಲೆ ಪರಿಷ್ಕರಿಸಲಾಗುತ್ತಿದೆ.

ಅಬಕಾರಿ ಆದಾಯ ಸಂಗ್ರಹ ಹೆಚ್ಚಳಕ್ಕಾಗಿ ರಾಜ್ಯ ಸರಕಾರ ಸತತವಾಗಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಹೆಚ್ಚಿಸುತ್ತಲೇ ಬಂದಿತ್ತು. ಇದೇ ಮೊದಲ ಬಾರಿಗೆ ಎಇಡಿ ಕಡಿಮೆ ಮಾಡುವ ನಿರ್ಧಾರ ಕೈಗೊಂಡಿರುವ ಸರಕಾರ, ಅಬಕಾರಿ ತೆರಿಗೆ ಇಳಿಕೆ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ ನೀಡಿದೆ.

Advertisement
Next Article