ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜುಲೈ.15 ರಂದು ಮುಂಗಾರು ವಿಧಾನಮಂಡಲ ಅಧಿವೇಶನ.!

07:47 AM Jul 03, 2024 IST | Bcsuddi
Advertisement

 

Advertisement

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿತ್ತು. ಈ ಶಿಫಾರಸ್ಸಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮೋದನೆ ನೀಡಿದ್ದು, ಜುಲೈ.15ರಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ನಿಗದಿ ಪಡಿಸಿ ಗೆಜೆಟ್ ಅಧಿಸೂಚನೆಯಲ್ಲಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ವಿಶೇಷ ರಾಜ್ಯಪತ್ರಿಕೆಯಲ್ಲಿ ಅಧಿಸೂಚನೆ ಹೊರಡಿಸಿರುವಂತ ರಾಜ್ಯಪಾಲ ಥಾವರ್ ಚಂಗ್ ಗೆಹ್ಲೋಟ್ ಅವರು, ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಜುಲೈ.15, 2024ರಂದು ಸೋಮವಾರ ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಸಭೆಯನ್ನು ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಅಂತ ತಿಳಿಸಿದ್ದಾರೆ.

ಅಂದಹಾಗೇ ನಿನ್ನೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಹೆಚ್ ಕೆ ಪಾಟೀಲ್ ಅವರು, ಕರ್ನಾಟಕ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ದಿನಾಂಕ: 15.07.2024 ರಿಂದ 26.07.2024 ರವರೆಗೆ ಕರೆಯಲು ಗೌರವಾನ್ವಿತ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ ಎಂದಿದ್ದರು.

ದಿನಾಂಕ: 20.06.2024 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿರವರಿಗೆ ಅಧಿಕಾರ ನೀಡಲಾಗಿತ್ತು. ಅದರಂತೆ, ಮುಖ್ಯಮಂತ್ರಿಗಳು ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಿರುತ್ತಾರೆ ಎಂದು ಮಾಹಿತಿ ನೀಡಿದ್ದರು.

Tags :
ಜುಲೈ.15 ರಂದು ಮುಂಗಾರು ವಿಧಾನಮಂಡಲ ಅಧಿವೇಶನ.!
Advertisement
Next Article