ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜುಲೈ 20ರಂದು ಮಿನಿ ಉದ್ಯೋಗ ಮೇಳ

08:03 AM Jul 17, 2024 IST | Bcsuddi
Advertisement

 

Advertisement

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಇದೇ ಜುಲೈ 20ರಂದು ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ 8ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮೊ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಹಾಗೂ 18 ರಿಂದ 30 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳು, ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ  7022459064, 8105619020, 9945587060 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Tags :
ಜುಲೈ 20ರಂದು ಮಿನಿ ಉದ್ಯೋಗ ಮೇಳ
Advertisement
Next Article