ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜುಲೈ 24ಕ್ಕೆ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಸಾಧ್ಯತೆ

01:56 PM Jul 03, 2024 IST | Bcsuddi
Advertisement

ನವದೆಹಲಿ: ಮೋದಿ 3.0 ಸರ್ಕಾರದ ಮೊದಲ ಬಜೆಟ್ ಜುಲೈ 24ಕ್ಕೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Advertisement

ಜುಲೈ 22ಕ್ಕೆ ಮುಂಗಾರು ಅಧಿವೇಶನ ಶುರುವಾಗಲಿದ್ದು, ಜುಲೈ 23ಕ್ಕೆ ಆರ್ಥಿಕ ಸಮೀಕ್ಷಾ ವರದಿ ಪ್ರಸ್ತುತಪಡಿಸಲಾಗುತ್ತದೆ. ಜುಲೈ 24ಕ್ಕೆ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಬಜೆಟ್ ತಯಾರಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ ಎನ್ನಲಾಗಿದೆ.

18ನೇ ಲೋಕಸಭೆಯ ಮೊದಲ ಅಧಿವೇಶನ ಜುಲೈ 2ರಂದು ಮುಕ್ತಾಯಗೊಂಡಿದೆ. ಜುಲೈ 22ಕ್ಕೆ ಎರಡನೇ ಅಧಿವೇಶನ ಆರಂಭವಾಗಿ ಜುಲೈ 24ಕ್ಕೆ ಬಜೆಟ್ ಮಂಡನೆ ಆಗಬಹುದು ಎನ್ನಲಾಗುತ್ತಿದೆ.

ಸಂಸತ್ತಿನಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಬಾರಿಯ ಬಜೆಟ್ನಲ್ಲಿ ಬಡವರು, ಯುವಜನರು, ಮಹಿಳೆಯರು, ರೈತರಿಗೆ ಆದ್ಯತೆ ಸಿಗಲಿದೆ. ಹಾಗೆಯೇ, ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ನಿಟ್ಟಿನಲ್ಲಿ ಹಲವು ಐತಿಹಾಸಿಕ ಹೆಜ್ಜೆಗಳನ್ನು ಬಜೆಟ್ ನಲ್ಲಿ ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ

Advertisement
Next Article