For the best experience, open
https://m.bcsuddi.com
on your mobile browser.
Advertisement

ಜೂನ್ 9ಕ್ಕೆ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

02:59 PM Jun 07, 2024 IST | Bcsuddi
ಜೂನ್ 9ಕ್ಕೆ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ
Advertisement

ನವದೆಹಲಿ: ಜೂನ್ 9 ರ ಸಂಜೆ 6ಗಂಟೆಗೆ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಿತು. ಈ ಸಂದರ್ಭ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಈ ಹಿಂದೆ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಶನಿವಾರ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಇದೀಗ ಭಾನುವಾರ ಪ್ರಮಾಣ ವಚನ ನಡೆಯಲಿದೆ ಎಂದು ಅಧಿಕೃತವಾಗಿ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಯಾರೆಲ್ಲ ಪ್ರಮಾಣ ವಚನ ನಡೆಸಲಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದುಬರಬೇಕಿದೆ.

Advertisement

Author Image

Advertisement