ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜೂನ್ 9ರಂದು ಪಿಎಂ ಆಗಿ ಮೋದಿ 3ನೇ ಬಾರಿ ಪ್ರಮಾಣ ವಚನ - ಸಿಎಂ ಪದಗ್ರಹಣ ಮುಂದೂಡಿದ ಚಂದ್ರಬಾಬು ನಾಯ್ಡು

01:29 PM Jun 06, 2024 IST | Bcsuddi
Advertisement

ಆಂಧ್ರ ಪ್ರದೇಶ : ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಟಿಡಿಪಿ ಪಕ್ಷ 175 ಸ್ಥಾನಗಳಲ್ಲಿ 135 ಸ್ಥಾನಗಳನ್ನು ಗೆದ್ದು, ಅಧಿಕಾರದ ಗದ್ದುಗೆಯನ್ನು ಹಿಡಿದಿದೆ.

Advertisement

ಆ ಮೂಲಕ ಜಗನ್‌ ಮೋಹನ್‌ ವೈಎಸ್‌ಆರ್‌ಸಿಪಿ ಪಕ್ಷದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ, ಮತ್ತೆ ಆಂಧ್ರ ಸಿಎಂ ಆಗಿ ಚುಕ್ಕಾಣಿ ಹಿಡಿಯಲಿದ್ದಾರೆ. ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಮೈತ್ರಿಯಾಗಿ ಒಟ್ಟು 164 ಸ್ಥಾನಗಳನ್ನು ಪಡೆದುಕೊಂಡಿವೆ.

ಹೀಗಾಗಿ, ಇದೇ ಜೂನ್‌ 9 ರಂದು ಅಮರಾವತಿಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿತ್ತು. ಇದೀಗ ಪ್ರಮಾಣವಚನದ ಕಾರ್ಯಕ್ರಮ ಮುಂದೂಡಿಕೆ ಆಗಿದೆ ಎಂದು ವರದಿಯಾಗಿದೆ.

ಅದೇ ದಿನ ಪ್ರಧಾನಿಯಾಗಿ ಮೋದಿ ಮೂರನೇ ಬಾರಿ ಪ್ರಮಾಣ ವಚನ ಸೀಕ್ವರಿಸಲಿದ್ದು, ಈ ಕಾರಣದಿಂದ ನಾಯ್ಡು ಅವರ ಪ್ರಮಾಣ ವಚನ ಕಾರ್ಯಕ್ರಮ ಮುಂದೂಡಿಕೆ ಆಗಿದೆ ಎನ್ನಲಾಗಿದೆ.

ಜೂನ್ 12 ರಂದು ಅಮರಾವತಿಯಲ್ಲಿ ಆಂಧ್ರದ ನೂತನ ಸಿಎಂ ಆಗಿ ಚಂದ್ರಬಾಬು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈ ಸಮಾರಂಭಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಎನ್‌ಡಿಎ ಒಕ್ಕೂಟದಲ್ಲಿರುವ ಟಿಡಿಪಿ ಮೈತ್ರಿಗೆ ಸಂಪೂರ್ಣ ಬೆಂಬಲ ಘೋಷಿಸಿದೆ.

Advertisement
Next Article