For the best experience, open
https://m.bcsuddi.com
on your mobile browser.
Advertisement

ಜೈಲಿನಿಂದ ಸೂರಜ್ ರೇವಣ್ಣ ಬಿಡುಗಡೆ..!

03:19 PM Jul 23, 2024 IST | Bcsuddi
ಜೈಲಿನಿಂದ ಸೂರಜ್ ರೇವಣ್ಣ ಬಿಡುಗಡೆ
Advertisement

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ನಿನ್ನೆ (ಸೋಮವಾರ) ಜಾಮೀನು ಮಂಜೂರಾದ ಹಿನ್ನಲೆಯಲ್ಲಿ ಇಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಸೋಮವಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪ್ರತಿ ಎರಡನೇ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗಬೇಕು. ಆರು ತಿಂಗಳ ಒಳಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಬೇಕು. ಎರಡು ಲಕ್ಷ ರೂಪಾಯಿ ಹಾಗೂ ಇಬ್ಬರು ಶ್ಯೂರಿಟಿ ಹಾಕಬೇಕು.

ಪಾಸ್‌ಪೋರ್ಟ್‌ ಸರಂಡರ್ ಮಾಡಬೇಕು. ಅರ್ಜಿದಾರರು ಯಾವುದೇ ರೀತಿಯಲ್ಲಿ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ಆರು ತಿಂಗಳ ಅವಧಿಗೆ ಅಥವಾ ಚಾರ್ಜ್ ಶೀಟ್​ ಸಲ್ಲಿಸುವವರೆಗೆ ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು ಎಂದು ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

Advertisement

Author Image

Advertisement