ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ – ಹೈಕೋರ್ಟ್

11:38 AM Dec 18, 2023 IST | Bcsuddi
Advertisement

ಬೆಂಗಳೂರು : ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

Advertisement

ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ ಮತ್ತು ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದ ಆರೋಪಸಂಬಂಧ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ರದ್ದು ಮಾಡುವಂತೆ ಕೋರಿ ಕೆ.ಆರ್.ಪೇಟೆ ಪಟ್ಟಣದ ಸುಭಾಷ್‌ ನಗರದ ನಿವಾಸಿ ಕೆ.ಟಿ.ನಟರಾಜು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್ ಚೆಂದನ್ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ.

ಸಂಚಾರ ನಿಯಮ ಉಲ್ಲಂ ಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀ ಸರು ಯಾವುದೇ ಸಂದರ್ಭದಲ್ಲಿ ಆರೋಪಿ ಯಿಂದ ದಂಡದ ಮೊತ್ತ ಸಂಗ್ರಹಿಸಲು ಅವಕಾ ಶವಿಲ್ಲ ಎಂದು ಹೈಕೋರ್ಟ್ ಪುನರುಚ್ಚರಿಸಿದೆ.

ಹೈಕೋರ್ಟ್ ನೀಡಿದ್ದ ತೀರ್ಪು ಉಲ್ಲೇಖಿಸಿದ ನ್ಯಾಯಪೀಠ, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ಕಚೇರಿ ಹೊರಡಿಸಿರುವ ಸುತ್ತೋಲೆ ಪ್ರಕಾರ, ದಂಡದ ಮೊತ್ತವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಮಾತ್ರ ಅಧಿಕಾ ರವಿದೆ. ಯಾವುದೇ ಪರಿಸ್ಥಿತಿಯಲ್ಲೂ ಸಂಚಾರ ಪೊಲೀಸರು ಆರೋಪಿಯಿಂದ ದಂಡ ಸಂಗ್ರಹಿ ಸಲು ಸಾಧ್ಯವಿಲ್ಲ. ವಾಹನ ತಪಾಸಣಾ ಚಟುವ ಟಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡ ಬೇಕು. ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆಗೆ ಮುಂದಾದರೆ ವ್ಯಕ್ತಿಯನ್ನು ತಡೆಯಬೇಕು. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಠಾಣೆಯ ಪೊಲೀಸರನ್ನು ಕರೆಸಿ, ಆರೋಪಿಯನ್ನು ವಶಕ್ಕೆ ನೀಡಬೇಕು. ಇಲ್ಲದಿದ್ದರೆ ಹಲ್ಲೆ ಹಾಗೂ ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪ್ರಕರಣ ವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

Advertisement
Next Article