For the best experience, open
https://m.bcsuddi.com
on your mobile browser.
Advertisement

ಠೇವಣಿ ಕಳೆದುಕೊಂಡು ಸೋತಿರುವ ಅಭ್ಯರ್ಥಿ ವಿರೋಧ ಪಕ್ಷದ ನಾಯಕ- ಕಾಂಗ್ರೆಸ್ ವ್ಯಂಗ್ಯ

09:04 AM Nov 18, 2023 IST | Bcsuddi
ಠೇವಣಿ ಕಳೆದುಕೊಂಡು ಸೋತಿರುವ ಅಭ್ಯರ್ಥಿ ವಿರೋಧ ಪಕ್ಷದ ನಾಯಕ  ಕಾಂಗ್ರೆಸ್ ವ್ಯಂಗ್ಯ
Advertisement

ಬೆಂಗಳೂರು: ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಬೆನ್ನಲ್ಲೇ ಕಾಂಗ್ರೆಸ್ ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ! ಎಂದು ವ್ಯಂಗ್ಯ ಮಾಡಿದೆ.

ಬಿಜೆಪಿ ವಿಪಕ್ಷ ನಾಯಕನ ಸ್ಥಾನಕ್ಕೆ ಶಾಸಕ ಆರ್. ಅಶೋಕ್ ಅವರು ಆಯ್ಕೆ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್ ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಗೆ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ ಎಂದು ಅಣಕಿಸಿದೆ.

ಇನ್ನು ರಾಜ್ಯಕ್ಕೆ ವಿರೋಧ ಪಕ್ಷದ ನಾಯಕನನ್ನು ಕೊಡಿ ಎಂದರೆ ವಿರೋಧ ಪಕ್ಷವನ್ನೇ ವಿರೋಧಿಸುವ ನಾಯಕರನ್ನು ಕೊಡುತ್ತಿದೆ. ಯಾವುದೇ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೂ ಕಿತ್ತಾಡದಷ್ಟು ಬಿಜೆಪಿಯಲ್ಲಿ ಕಿತ್ತಾಟ ಜೋರಾಗಿದೆ.

Advertisement

ಬಿಜೆಪಿ ನಾಯಕರು ಸೇರುವ ಜಾಗದಲ್ಲಿ ಕೋಲು, ದೊಣ್ಣೆ ಹಾಗೂ ಇತರೆ ಯಾವುದೇ ಆಯುಧವಾಗಿ ಬಳಸಬಹುದಾದ ವಸ್ತುಗಳನ್ನು ದೊರಕದಂತೆ ನೋಡಕೊಳ್ಳಬೇಕು. ಅಕಸ್ಮಾತ್ ಹೊಡೆದಾಡಿಕೊಂಡರೆ ಆಸ್ಪತ್ರೆಗಳಲ್ಲಿ ನೂಕುನುಗ್ಗಲಾಗುವ ಸಾಧ್ಯತೆ ಇರುತ್ತದೆ! ಎಂದು ಲೇವಡಿ ಮಾಡಿದ್ದಾರೆ.

Author Image

Advertisement