For the best experience, open
https://m.bcsuddi.com
on your mobile browser.
Advertisement

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

07:20 AM Nov 07, 2023 IST | Bcsuddi
ಡಾ  ಬಿ ಆರ್  ಅಂಬೇಡ್ಕರ್ ಅಭಿವೃದ್ಧಿ ನಿಗಮದ ದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
Advertisement

ಹೊಸಪೇಟೆ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿಜಯನಗರ ಜಿಲ್ಲಾ ಕಚೇರಿಯಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಗಂಗಾಕಲ್ಯಾಣ ಯೋಜನೆ ಮತ್ತು ಭೂ ಒಡೆತನ ಯೋಜನೆಯಡಿ ಅರ್ಜಿ ಸಲ್ಲಿಸಲು ನ.29 ಕೊನೆಯದಿನವಾಗಿದೆ.

Advertisement

ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ಸೇವಾಸಿಂಧು ಪೋರ್ಟಲ್  https://sevasindhu.karnataka.gov.in/ ಗ್ರಾಮಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
Author Image

Advertisement