ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್‌: ಸುಪ್ರೀಂ ಮೊರೆ ಹೋದ ಯತ್ನಾಳ್

05:09 PM Sep 05, 2024 IST | BC Suddi
Advertisement

ನವದೆಹಲಿ: ಆದಾಯ ಮೀರಿ ಅಸ್ತಿ ಗಳಿಕೆಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ಆದೇಶದ ಅನ್ವಯ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

Advertisement

ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿತ್ತು. ಸಿಬಿಐಗೆ ನೀಡಿದ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಯತ್ನಾಳ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಲಿ. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿ ಎರಡು ಅರ್ಜಿಗಳನ್ನು ವಜಾ ಮಾಡಿತ್ತು. ಈ ಹಿನ್ನೆಲೆ ಸುಪ್ರೀಂಕೋರ್ಟ್‌ಗೆ ಯತ್ನಾಳ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Advertisement
Next Article