For the best experience, open
https://m.bcsuddi.com
on your mobile browser.
Advertisement

ಡಿ.10ಕ್ಕೆ ಈ ಊರುಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ

08:29 AM Dec 08, 2023 IST | Bcsuddi
ಡಿ 10ಕ್ಕೆ ಈ ಊರುಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ
Advertisement

 ಹೊಸಪೇಟೆ: ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಡಿ.10ರಂದು ನಡೆಯುವ ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು ಬಿ.ಎಲ್ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಪುರುಷ, ಮಹಿಳಾ ಹಾಗೂ ತೃತೀಯ ಲಿಂಗ) ಹಾಗೂ ಸೇವಾನಿರತ & ಬ್ಯಾಕ್‌ಲಾಗ್-454 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಡಿ.10ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೆಂದ್ರಗಳಲ್ಲಿ ನಡೆಸಲಾಗುವುದು.

Advertisement

ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ಹಾಗೂ ಕರೆಪತ್ರದ ಲಿಂಕ ಅನ್ನು ಸಹ ಕಳುಹಿಸಲಾಗಿದ್ದು, ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕು.

Tags :
Author Image

Advertisement