ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಡಿ.13ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ: ವಿಜಯತರಿಗೆ ಬಹುಮಾನ.!

07:54 AM Dec 06, 2023 IST | Bcsuddi
Advertisement

 

Advertisement

ಹೊಸಪೇಟೆ: ಕೃಷಿ ಇಲಾಖೆಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ-2024ರ ಅಂಗವಾಗಿ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಡಿ.13ರಂದು ನಗರದ ಹರಿಹರ ರಸ್ತೆಯ ವಿಜಯನಗರ ನ್ಯಾಷನಲ್ ಕಾಲೇಜು ಹಿಂಭಾಗದಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.

ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ವಿಜಯನಗರ ಜಿಲ್ಲೆಯಿಂದ ಸ್ಪರ್ಧಿಗಳನ್ನು ಆಯ್ಕೆ ಮಾಡಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಏರ್ಪಡಿಸಲಾದ ಡಿ.13ರ ಜಿಲ್ಲಾ ಮಟ್ಟದ “ಸಿರಿಧಾನ್ಯ ಪಾಕಸ್ಪರ್ಧೆ"ಯಲ್ಲಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಪ್ರತಿ ಸ್ಪರ್ಧಿಗೆ ಒಂದೇ ತಿನಿಸುಗಳಿಗೆ (ಅಡುಗೆ) ಸಿಹಿ ಅಥವಾ ಖಾರ ಮಾಡಲು ಅವಕಾಶವಿರುತ್ತದೆ. ಸಿರಿಧಾನ್ಯ ಸಸ್ಯಹಾರಿ ತಿನಿಸುಗಳಿಗೆ ಮಾತ್ರ ಅವಕಾಶವಿದ್ದು, ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ ತಿನಿಸು ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕು. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ.

ತಯಾರಿಸಿದ ತಿನಿಸುಗಳ ಪ್ರದರ್ಶನ, ಬಳಸಿದ ಸಾಮಗ್ರಿಗಳು, ತೊರಿಕೆ, ರುಚಿ, ಸುವಾಸನೆ, ಪೌಷ್ಟಿಕತೆಗಳ ಮೇಲೆ ಅಂತಿಮ ತೀರ್ಪು ಕೈಗೊಳ್ಳಲಾಗುವುದು. ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಒಂದು ಸಿಹಿ ಹಾಗೂ ಖಾರ ತಿನಿಸನ್ನು ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟಕ್ಕೆ ಪ್ರಥಮ ಬಹುಮಾನವಾಗಿ ಖಾರ ತಿನಿಸು ಅಥವಾ ಸಿಹಿ ತಿನಿಸಿಗೆ ತಲಾ ರೂ. 5000 ಬಹುಮಾನವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

 

 

 

Tags :
ಡಿ.13ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ: ವಿಜಯತರಿಗೆ ಬಹುಮಾನ.!
Advertisement
Next Article