For the best experience, open
https://m.bcsuddi.com
on your mobile browser.
Advertisement

'ಡಿ.15ಕ್ಕೆ ಅಯೋಧ್ಯ ಏರ್‌ಪೋರ್ಟ್‌ ಸಿದ್ಧ' - ಯೋಗಿ ಆದಿತ್ಯನಾಥ್

09:07 AM Dec 03, 2023 IST | Bcsuddi
 ಡಿ 15ಕ್ಕೆ ಅಯೋಧ್ಯ ಏರ್‌ಪೋರ್ಟ್‌ ಸಿದ್ಧ    ಯೋಗಿ ಆದಿತ್ಯನಾಥ್
Advertisement

ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಒಂದು ತಿಂಗಳ ಮುಂಚೆಯೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿಸೆಂಬರ್ 15 ರೊಳಗೆ ಸಿದ್ಧವಾಗಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ವಿಮಾನ ನಿಲ್ದಾಣವನ್ನು ‘ಮರ್ಯಾದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌’ ಎಂದು ಕರೆಯಲಾಗುವುದು ಎಂದರು.

ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿಕೆ ಸಿಂಗ್ ಅವರೊಂದಿಗೆ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಂದು ಭೇಟಿ ನೀಡಿದ್ದರು.

Advertisement

Author Image

Advertisement