ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಡಿ.4 ಸಂಸತ್ತಿನ ಚಳಿಗಾಲ ಅಧಿವೇಶನ ಶುರು- ಇಂದು ಸರ್ವಪಕ್ಷ ಸಭೆ

11:28 AM Dec 02, 2023 IST | Bcsuddi
Advertisement

ನವದೆಹಲಿ: ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಇಂದು ಶನಿವಾರ ಸರ್ವಪಕ್ಷ ಸಭೆ ಕರೆಯಲಾಗಿದೆ.

Advertisement

ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು ಈ ಹಿನ್ನಲೆ ಇಂದು ಸರ್ವಪಕ್ಷ ಸಭೆ ನಡೆಯಲಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಕೇಂದ್ರ ನಾಯಕರು ಭಾಗವಹಿಸುವ ಸಾಧ್ಯತೆ ಇದೆ. 37 ಮಸೂದೆಗಳು ಸಂಸತ್ತಿನಲ್ಲಿ ಬಾಕಿ ಉಳಿದಿವೆ ಅವುಗಳಲ್ಲಿ 12 ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮತ್ತು ಏಳು ಮಸೂದೆಗಳು ಪರಿಚಯ, ಪರಿಗಣನೆ, ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ.

ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಉತ್ಸಾಹವಾಗಿರುವ ಅಧಿವೇಶನದ ಮೇಲೆ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಪ್ರಮುಖ ಪ್ರಭಾವ ಬೀರಲಿದೆ.

Advertisement
Next Article