ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಡ್ಯಾನ್ಸ್ ಮಾಡುತ್ತಿರುವಾಗಲೇ ಹೆಡ್ ಕಾನ್‌ಸ್ಟೇಬಲ್ ಕುಸಿದು ಬಿದ್ದು ಸಾವು

03:32 PM Aug 30, 2024 IST | BC Suddi
Advertisement

ದೆಹಲಿ :ಡ್ಯಾನ್ಸ್ ಮಾಡುತ್ತಿರುವಾಗಲೇ ಹೆಡ್ ಕಾನ್ ಸ್ಟೇಬಲ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

Advertisement

ಸಾವಿಗೂ ಕೆಲ ನಿಮಿಷಗಳ ಮುಂಚೆ ಎಲ್ಲರೊಂದಿಗೆ ಕಾನ್‌ಸ್ಟೆಬಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿರುವ ರವಿಕುಮಾರ್ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಆಗಿ ವರ್ಗಾವಣೆಯಾಗುತ್ತಿದ್ದಂತೆ ಬೀಳ್ಕೊಡುಗೆ ಪಾರ್ಟಿ ಆಯೋಜಿಸಿದ್ದರು.

ಈ ವೇಳೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಹೆಡ್ ಕಾನ್‌ಸ್ಟೆಬಲ್ ಕುಸಿದು ಬಿದ್ದಿದ್ದಾರೆ. ತಕ್ಷಣ ಸಹ ಸಿಬ್ಬಂದಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು ರವಿಕುಮಾರ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article