For the best experience, open
https://m.bcsuddi.com
on your mobile browser.
Advertisement

ತಮಿಳುನಾಡಿನಲ್ಲಿ ಬಹುಜನ ಸಮಾಜ ಪಕ್ಷದ ಅಧ್ಯಕ್ಷನ ಹತ್ಯೆ- ಪ್ರಕರಣಕ್ಕೆ ಬಿಗ್ ಟ್ವಿಸ್ಟ್

11:13 AM Jul 06, 2024 IST | Bcsuddi
ತಮಿಳುನಾಡಿನಲ್ಲಿ ಬಹುಜನ ಸಮಾಜ ಪಕ್ಷದ ಅಧ್ಯಕ್ಷನ ಹತ್ಯೆ  ಪ್ರಕರಣಕ್ಕೆ ಬಿಗ್ ಟ್ವಿಸ್ಟ್
Advertisement

ಚೆನ್ನೈ : ತಮಿಳುನಾಡಿನ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಅಪರಿಚಿತ ಗ್ಯಾಂಗ್‌ವೊಂದು ಚೆನ್ನೈನ ಪೆರಂಪುರದಲ್ಲಿ ಹತ್ಯೆ ಮಾಡಿದೆ. ಈ ಪ್ರಕರಣ ದಿಢೀರ್ ಟ್ವಿಸ್ಟ್ ಪಡೆದುಕೊಂಡಿದೆ.

ಜನಪ್ರಿಯ ರಾಜಕೀಯ ಪಕ್ಷದ ರಾಜ್ಯ ನಾಯಕನನ್ನು ಬರ್ಬರವಾಗಿ ಕಡಿದು ಕೊಂದಿರುವ ಘಟನೆ ಭಾರೀ ಆಘಾತವನ್ನುಂಟು ಮಾಡಿದೆ. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣದಲ್ಲಿ 8 ಮಂದಿ ಬಂದು ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.

Advertisement

ಸೇಂಬಿಯಂ ಪೊಲೀಸ್ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದೆ. ದುಷ್ಕರ್ಮಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಆರ್ಮ್‌ಸ್ಟ್ರಾಂಗ್ ಬಹುಜನ ಸಮಾಜ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷರಾಗಿದ್ದಾರೆ. 52 ವರ್ಷದ ಅವರು ರಾತ್ರಿ (5 ಜುಲೈ) ಚೆನ್ನೈನ ಪೆರಂಪುರದಲ್ಲಿರುವ ತಮ್ಮ ಮನೆಯ ಬಳಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದರು. ಆಗ ಅಲ್ಲಿಗೆ ಬಂದ ಅಪರಿಚಿತ ಗ್ಯಾಂಗ್ ಆರ್ಮ್ ಸ್ಟ್ರಾಂಗ್ ನನ್ನು ಏಕಾಏಕಿ ಚಾಕುವಿನಿಂದ ಇರಿದು ಕೊಲೆ ಮಾಡಿದೆ.

ಪಕ್ಕದಲ್ಲಿ ನಿಂತಿದ್ದ ಅವರ ಸ್ನೇಹಿತರು ಇದನ್ನು ತಡೆಯಲು ಯತ್ನಿಸಿದ್ದಾರೆ. ಆದಾಗ್ಯೂ ಗ್ಯಾಂಗ್ ಜನಸಮೂಹ ಆರ್ಮ್‌ಸ್ಟ್ರಾಂಗ್‌ನನ್ನು ಮನಬಂದಂತೆ ಹಲ್ಲೆ ಮಾಡಿದೆ. ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದ ಆರ್ಮ್‌ಸ್ಟ್ರಾಂಗ್ ಅವರನ್ನು ಅಲ್ಲೇ ಬಿಟ್ಟು ಗ್ಯಾಂಗ್ ಕ್ಷಣಾರ್ಧದಲ್ಲಿ ಅಲ್ಲಿಂದ ಪರಾರಿಯಾಗಿದೆ. ಅಲ್ಲದೆ ಆರ್ಮ್‌ಸ್ಟ್ರಾಂಗ್‌ನ ಇಬ್ಬರು ಸ್ನೇಹಿತರ ಮೇಲೂ ಚಾಕುವಿನಿಂದ ಹಲ್ಲೆ ಮಾಡಲಾಗಿದೆ.

ಇನ್ನೂ 10 ವಿಶೇಷ ತಂಡಗಳನ್ನು ರಚಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಪ್ರಕರಣ ದಿಢೀರ್ ಟ್ವಿಸ್ಟ್ ಪಡೆದುಕೊಂಡಿದೆ. ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣದಲ್ಲಿ 8 ಮಂದಿ ಶರಣಾಗಿದ್ದಾರೆ. ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮತ್ತು ಅವರ ಹತ್ಯೆಯ ಹಿಂದಿನ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Author Image

Advertisement