For the best experience, open
https://m.bcsuddi.com
on your mobile browser.
Advertisement

ತಮಿಳುನಾಡಿನ ತೆಂಕಾಶಿಯಲ್ಲಿ ಜಲಪ್ರವಾಹ - ದಿಢೀರ್‌ ಮಳೆಗೆ ಜನರು ತತ್ತರ

09:05 AM May 18, 2024 IST | Bcsuddi
ತಮಿಳುನಾಡಿನ ತೆಂಕಾಶಿಯಲ್ಲಿ ಜಲಪ್ರವಾಹ   ದಿಢೀರ್‌ ಮಳೆಗೆ ಜನರು ತತ್ತರ
Advertisement

ಚೆನ್ನೈ: ‌ಪಶ್ಚಿಮ ಘಟ್ಟಗಳಲ್ಲಿ ದಿಢೀರ್‌ ಮಳೆಗೆ ತಮಿಳುನಾಡಿನ ತೆಂಕಾಶಿಯಲ್ಲಿರುವ ಓಲ್ಡ್ ಕುರ್ಟಾಲಂ ಜಲಪಾತದಲ್ಲಿ ಶುಕ್ರವಾರ ಮಧ್ಯಾಹ್ನ ದಿಢೀರ್‌ ಪ್ರವಾಹ ಉಂಟಾಗಿದೆ. ಪರಿಣಾಮ ತನ್ನ ಸಂಬಂಧಿಕರೊಂದಿಗೆ ಸ್ನಾನಕ್ಕೆಂದು ತೆರಳಿದ್ದ 17 ವರ್ಷದ ಹುಡುಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

ಹುಡುಗನನ್ನು ಅಶ್ವಿನ್‌ ಎಂದು ಗುರುತಿಸಲಾಗಿದೆ. ಈತ ಪಳಯಂಕೊಟ್ಟೈನ NGO ಕಾಲೋನಿಯ 11 ನೇ ತರಗತಿ ವಿದ್ಯಾರ್ಥಿ. ವಿಷಯ ತಿಳಿದ ಕೂಡಲೇ ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಂಡವು ಜಿಲ್ಲಾಧಿಕಾರಿ ಎ.ಕೆ.ಕಮಲ್ ಕಿಶೋರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಸುರೇಶ್ ಕುಮಾರ್ ಅವರೊಂದಿಗೆ ರಕ್ಷಣಾ ಕಾರ್ಯಾಚರಣೆಗೆ ಮುಂದಾದರೂ.

ಪ್ರವಾಸಿಗರ ಗುಂಪೊಂದು ಹಳೆಯ ಕುರ್ಟಾಲಂ ಜಲಪಾತದಲ್ಲಿ ಸ್ನಾನ ಮಾಡುತ್ತಿತ್ತು. ಈ ವೇಳೆ ನೀರು ದಿಡೀರ್‌ ಆಗಿ ತುಂಬಿ ಹರಿದಿದೆ. ಪರಿಣಾಮ ಅರಿವಿಲ್ಲದೆ ಸಿಕ್ಕಿಬಿದ್ದ ಪ್ರವಾಸಿಗರು ಸಹಾಯಕ್ಕಾಗಿ ಕಿರುಚಾಡಿದ್ದಾರೆ. ಜಲಪಾತದ ಬಳಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯು ಪ್ರವಾಸಿ ತಾಣದಲ್ಲಿದ್ದ ಅಂಗಡಿಯವರ ನೆರವಿನೊಂದಿಗೆ ರಕ್ಷಿಸಲು ಧಾವಿಸಿದರು.

Advertisement

ಹಠಾತ್ ಪ್ರವಾಹವು ಎಷ್ಟು ತೀವ್ರವಾಗಿತ್ತು ಎಂದರೆ ಎಲ್ಲರೂ ತಮ್ಮ ತಮ್ಮ ರಕ್ಷಣೆಗೆಂದು ಓಡಿ ಬರುತ್ತಿದ್ದಾಗಲೇ ಜಲಪಾತದಿಂದ ಕಾರು ಪಾರ್ಕ್‌ಗೆ ಹೋಗುವ ಮಾರ್ಗವು ಮುಳುಗಡೆಯಾಯಿತು. ಈ ನಡುವೆ ಅಶ್ವಿನ್‌ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಂಡವು ಕಾರ್ಯಚರಣೆ ನಡೆಸಿ ಜಲಪಾತದಿಂದ ಸುಮಾರು 500 ಮೀಟರ್ ದೂರದಲ್ಲಿ ಕಲ್ಲುಗಳ ನಡುವೆ ಸಿಲುಕಿರುವ ಅಶ್ವಿನ್ ದೇಹವನ್ನು ಪತ್ತೆ ಮಾಡಿದೆ. ಸದ್ಯ ಸ್ಥಳೀಯ ಆಡಳಿತವು ಜಲಪಾತಕ್ಕೆ ಸಾರ್ವಜನಿಕರು ಪ್ರವೇಶಿಸುವುದನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.

Author Image

Advertisement