ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ದೀಪಿಕಾ ಪಡುಕೋಣೆ

12:59 PM Dec 16, 2023 IST | Bcsuddi
Advertisement

ಆಂಧ್ರಪ್ರದೇಶ: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ 'ಫೈಟರ್' ಸಿನಿಮಾದಲ್ಲಿ ಹೃತಿಕ್ ರೋಷನ್ ಜೊತೆಯಾಗಿ ನಟಿಸುತ್ತಿದ್ದು, ಈ ಚಿತ್ರದ ಬಿಡುಗಡೆ ಬೆನ್ನಲ್ಲೇ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ದೀಪಿಕಾ ಪಡುಕೋಣೆ ಮತ್ತು ಅವರ ಸಹೋದರಿ ಅನಿಶಾ ಅವರು ಡಿ. 14 ರಂದು ರಾತ್ರಿ ತಿರುಪತಿ ತಿಮ್ಮಪ್ಪನ ಸನ್ನಿದ್ಧಿಯಲ್ಲಿ ಕಾಣಿಸಿಕೊಂಡಿದ್ದಾರೆ.

ದೈವ ಭಕ್ತೆಯಾಗಿರುವ ದೀಪಿಕಾ ಪಡುಕೋಣೆ ಅವರು ಪದೇ ಪದೇ ದೇವಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅಲಿಪಿರಿಯಿಂದ ಸುಮಾರು ಎರಡೂವರೆ ಗಂಟೆಗಳ ಕಾಲ ಬೆಟ್ಟ ಹತ್ತಿ ದೇವಸ್ಥಾನಕ್ಕೆ ತಲುಪಿದ್ದಾರೆ. ಅಲ್ಲಿನ ರಾಧೆ ಶ್ಯಾಮ ಗೆಸ್ಟ್‌ ಹೌಸ್‌ನಲ್ಲಿ ತಂಗಿದ್ದು, ನಂತರ ವಿಐಪಿ ಪಾಸ್ ಪಡೆದು ಇಂದು ಬೆಳಗ್ಗೆ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

Advertisement
Next Article