ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತಿರುಪತಿ ಲಡ್ಡು ಪ್ರಕರಣ: ನಂದಿನಿ ಉತ್ಪನ್ನಗಳಿಗೆ ಬೇಡಿಕೆಯೋ ಬೇಡಿಕೆ!

12:23 PM Sep 26, 2024 IST | BC Suddi
Advertisement

ತಿರುಪತಿ ಲಡ್ಡು ವಿವಾದ ಪರೋಕ್ಷವಾಗಿ ಕರ್ನಾಟಕದ ಕೆಎಂಎಫ್​ನ ನಂದಿನಿ ಬ್ರ್ಯಾಂಡ್​​​ಗೆ ನೆರವಾಯಿತಾ? ಹೀಗೊಂದು ಪ್ರಶ್ನೆ ಮೂಡಲು ಕಾರಣ ಇದೆ. ತಿರುಪತಿ ಲಡ್ಡು ವಿವಾದದ ಬಳಿಕ ನಂದಿನಿ ಹಾಲು ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

Advertisement

ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಜತೆಗೆ, ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲೂ ಸೂಚನೆ ನೀಡಿತ್ತು. ಇದರಿಂದಾಗಿ ನಂದಿನಿ ಹಾಲು ಮತ್ತು ಹಾಲಿನ‌ ಉತ್ಪನ್ನಗಳ ಬೇಡಿಕೆ ಹೆಚ್ಚಳವಾಗಿದೆ.

ಮತ್ತೊಂದೆಡೆ, ಕಲಬೆರಕೆ ತುಪ್ಪ ಮತ್ತು ಹಾಲಿನ ಉತ್ಪನ್ನಗಳ ಆತಂಕದಿಂದಾಗಿ ಜನರಲ್ಲಿಯೂ ನಂದಿನಿ ಹಾಲು ಮತ್ತು ನಂದಿನಿ ಉತ್ಪನ್ನಗಳ ಮೇಲೆ ಒಲವು ಹೆಚ್ಚಾಗಿದೆ ಎಂದು ನಂದಿನಿ ಮೂಲಗಳು ತಿಳಿಸಿವೆ. ಸದ್ಯ ತಿರುಪತಿ ತಿರುಮಲ ದೇಗುಲ ಆಡಳಿತ ಮಂಡಳಿ ಕೂಡ ಲಡ್ಡು ತಯಾರಿಕೆಗಾಗಿ ನಂದಿನಿ ತುಪ್ಪವನ್ನೇ ಬಳಸುತ್ತಿದೆ.

Advertisement
Next Article