ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತಿರುಪತಿ ಲಡ್ಡು ವಿವಾದ: ಪ್ರಸಾದ ತಯಾರಿಕೆ ಕುರಿತು ಅಯೋಧ್ಯೆಯ ರಾಮ ಮಂದಿರದಿಂದ ಮಹತ್ವದ ನಿರ್ಧಾರ

12:06 PM Sep 27, 2024 IST | BC Suddi
Advertisement

ಅಯೋಧ್ಯೆ: ತಿರುಪತಿ ಲಡ್ಡು ಪರಿಶುದ್ಧತೆಯ ಬಗ್ಗೆ ಭಕ್ತರಲ್ಲಿ ಹೆಚ್ಚುತ್ತಿರುವ ಕಳವಳದ ನಡುವೆ ಅಯೋಧ್ಯೆಯ ರಾಮ ಮಂದಿರವು ಪ್ರಸಾದದ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ.

Advertisement

ಹೊರಗಡೆ ಏಜೆನ್ಸಿಗಳಿಂದ ತಯಾರಾಗುವ ಪ್ರಸಾದವನ್ನು ನಿಷೇಧಿಸಿದೆ. ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಸಲು ಕಲಬೆರಕೆ ತುಪ್ಪವನ್ನು ಬಳಸಲಾಗುತ್ತಿದೆ ಎಂಬ ಆರೋಪದ ನಡುವೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ತಿರುಪತಿಯಲ್ಲಿ ದೇವಾಲಯದ ಅಧಿಕಾರಿಗಳು ಪ್ರಾಯಶ್ಚಿತ್ತ ವಿಧಿಗಳನ್ನು ನಡೆಸಿದ್ದರು.

ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಮಾತನಾಡಿ, ದೇಶಾದ್ಯಂತ ಮಾರಾಟವಾಗುತ್ತಿರುವ ತುಪ್ಪದ ಶುದ್ಧತೆಯನ್ನು ಪ್ರಶ್ನಿಸಿದ್ದಾರೆ. ದೇವಾಲಯದ ಅರ್ಚಕರ ಮೇಲ್ವಿಚಾರಣೆಯಲ್ಲಿ ಮಾತ್ರ ಪ್ರಸಾದ ತಯಾರಿಸಬೇಕು ಎಂದು ಹೇಳಿದ್ದಾರೆ.

ಎಲ್ಲಾ ಪ್ರಮುಖ ದೇವಾಲಯಗಳು ಹಾಗೂ ಮಠಗಳಲ್ಲಿ ಹೊರಗಡೆ ಯಾವುದೇ ಸಂಸ್ಥೆಯು ಸಿದ್ಧಪಡಿಸಿರುವ ಪ್ರಸಾದದ ಮೇಲೆ ಸಂಪೂರ್ಣ ನಿಷೇಧ ಹೇರಲಾಗುವುದು ಎಂದರು. ದೇವರಿಗೆ ಪ್ರಸಾದವನ್ನು ದೇವಾಲಯದ ಅರ್ಚಕರ ಮೇಲ್ವಿಚಾರಣೆಯಲ್ಲಿ ತಯಾರಿಸಬೇಕು ಮತ್ತು ಅಂತಹ ಪ್ರಸಾದವನ್ನು ಮಾತ್ರ ದೇವರಿಗೆ ಅರ್ಪಿಸಬೇಕು ಎಂದು ಹೇಳಿದರು.

Advertisement
Next Article