ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತುಮಕೂರನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ: ಡಿಸಿಎಂ

05:06 PM Jan 29, 2024 IST | Bcsuddi
Advertisement

ತುಮಕೂರು: “ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

Advertisement

ತುಮಕೂರು ಮಾತನಾಡಿದ ಅವರು, “ತುಮಕೂರು ಜಿಲ್ಲೆ ಎರಡನೇ ಬೆಂಗಳೂರು ಆಗಿ ಪರಿವರ್ತನೆಯಾಗುವ ನಂಬಿಕೆ ಇದೆ. ಇಲ್ಲಿಯ ಸಂಸ್ಕೃತಿ, ಇಲ್ಲಿಯ ಜನ, ಇಲ್ಲಿಯ ನೆಲಕ್ಕೆ ತನ್ನದೇ ಆದ ಶಕ್ತಿ ಇದೆ. ತುಮಕೂರು ಜಿಲ್ಲೆಯನ್ನು ಹೊಸ ಬೆಂಗಳೂರಾಗಿ ಪರಿವರ್ತಿಸಲು ಮುಂದಿನ 50 ವರ್ಷಗಳ ಯೋಜನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬೆಂಗಳೂರಿನ ಸಚಿವನಾಗಿ ನಾನು ಬೆಂಗಳೂರಿನ ಒತ್ತಡ ಕಡಿಮೆ ಮಾಡಬೇಕು ಎಂದು ಆಲೋಚನೆ ಮಾಡಿದಾಗ, ರಾಮನಗರ, ಚನ್ನಪಟ್ಟಣ, ನೆಲಮಂಗಲ, ದೊಡ್ಡಬಳ್ಳಾಪುರ ನಂತರ ತುಮಕೂರು ಪರ್ಯಾಯವಾಗಿದೆ.

ಇಂದು ತುಮಕೂರು ಜಿಲ್ಲೆಯ ಸಾವಿರಾರು ಕೋಟಿಯ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಯುವಕರು, ಮಹಿಳೆಯರು, ರೈತರು ಭಾಗವಹಿಸಿದ್ದಾರೆ. ತುಮಕೂರು ಕಲ್ಪತರುನಾಡು. ಇತಿಹಾಸ ಹೊಂದಿರುವ ಧಾರ್ಮಿಕ ಕ್ಷೇತ್ರ ಕೂಡ ಆಗಿದೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ದೂರದೃಷ್ಟಿ ಇಟ್ಟುಕೊಂಡು ತುಮಕೂರಿನಲ್ಲಿ ಕೈಗಾರಿಕಾ ಪ್ರದೇಶ ಆರಂಭಿಸಲಾಯಿತು. ಈ ಭಾಗದ ಅಭಿವೃದ್ಧಿಗೆ ಬೆಂಗಳೂರಿನಿಂದ ಬೆಳಗಾವಿ ಮೂಲಕ ಪೂನಾಗೆ ಸಾಗುವ ಕಾರಿಡಾರ್ ಗೆ ನಾವು ಆದ್ಯತೆ ನೀಡಬೇಕಿದೆ.

ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಬೇಕು, ಬೆಂಗಳೂರಿಗೆ ವಲಸೆ ಬರುವುದನ್ನು ತಪ್ಪಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ. ಇದಕ್ಕಾಗಿ ಕೈಗಾರಿಕ ಪ್ರದೇಶಗಳ ಸ್ಥಾಪನೆಗೆ ಆದ್ಯತೆ ನೀಡಲಾಗಿದೆ. ದೇವರು ನಮಗೆ ವರ ಮತ್ತು ಶಾಪ ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ಈ ಅವಕಾಶದಲ್ಲಿ ನಾವು ಯಾವ ರೀತಿ ಬದಲಾವಣೆ ತರುತ್ತೇವೆ ಎಂಬುದು ಮುಖ್ಯ. ರೈತರ ಬದುಕಿನಲ್ಲಿ ಬದಲಾವಣೆ ತರಬೇಕು, ಈ ಭಾಗದ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಯೋಜನೆ ಜಾರಿ ಮಾಡಲು ಮುಂದಾಗಿದ್ದೇವೆ. ಈ ಸರ್ಕಾರ ಕೊಟ್ಟ ಮಾತಿನಂತೆ ನುಡಿದಂತೆ ನಡೆದಿದೆ ಎಂದು ಹೇಳಿದ್ದಾರೆ.

Advertisement
Next Article