ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ, ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ.!

07:33 AM Oct 03, 2024 IST | BC Suddi
Advertisement

 

Advertisement

 

   ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ ಎಂದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದ್ದು 2027 ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷದ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 115.11.08 ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದರು.

ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ; ಸಾರ್ವಜನಿಕರಿಗೆ ಅನಾನುಕೂ

Tags :
ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ.!ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ
Advertisement
Next Article