ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತೃತೀಯ ಲಿಂಗಿಗಳಿಗೆ ಗುಡ್ ನ್ಯೂಸ್ .! ಗೃಹಲಕ್ಷಿ ಯೋಜನೆಯಲ್ಲಿ ಹಣ ಜಮೆ.!

07:38 AM Jun 12, 2024 IST | Bcsuddi
Advertisement

 

Advertisement

ಬೆಂಗಳೂರು : ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳ ಖಾತೆಗೆ ಗೃಹ ಲಕ್ಷ್ಮಿ ಹಣ ಜಮೆ ಆಗಲಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿಗಳು ವಿತರಣೆ ಮಾಡಿರುವ ಐಡಿ ಕಾರ್ಡ್ ನೀಡಿ ಗೃಹಲಕ್ಷ್ಮಿ ಹಣಕ್ಕೆ ಅರ್ಜಿ ಸಲ್ಲಿಸಬಹುದು. ತೃತೀಯ ಲಿಂಗಿಗಳಿಗೆ ಹಣ ನೀಡಲು ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆದೇಶ ಆಗಿದೆ. ಈ ತಿಂಗಳ ಕೊನೆಯ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜಿಲ್ಲಾಧಿಕಾರಿಗಳಿಂದ ವಿತರಿಲ್ಪಟ್ಟ ಗುರುತಿನ ಚೀಟಿ ಇದ್ದರೆ ತೃತೀಯ ಲಿಂಗಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ತಿಂಗಳ ಒಳಗಡೆ ಅರ್ಜಿ ಸಲ್ಲಿಕೆಯಾದ್ರೆ ಮುಂದಿನ ತಿಂಗಳೇ ತೃತೀಯ ಲಿಂಗಿಗಳ ಖಾತೆಗೆ ಹಣ ಜಮಾ ಆಗಲಿದೆ.

ರಾಜ್ಯ ಸರ್ಕಾರದ ತೃತೀಯ ಲಿಂಗಿಗಳಿಗೂ ಕೂಡ ಗೃಹಲಕ್ಷ್ಮಿ ಹಣ ನೀಡೋದಕ್ಕೆ ಮುಂದಾಗಿದೆ. ಈಗಾಗಲೇ ಅರ್ಜಿ ಸಹ ಸಿದ್ಧವಾಗುತ್ತಿದ್ದು, ಜಿಲ್ಲಾಧಿಕಾರಿಗಳು ನೀಡಿರುವ ಗುರುತಿನ ಚೀಟಿ ನೀಡಿ ಗೃಹಲಕ್ಷ್ಮಿಹಣಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇದೇ ತಿಂಗಳ ಕೊನೆಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಅರ್ಜಿ ಸಲ್ಲಿಸಿದ ತೃತೀಯ ಲಿಂಗಿಗಳಿಗೆ ಮುಂದಿನ ತಿಂಗಳಿನಿಂದ ಖಾತೆಗೆ ಹಣ ಜಮಾ ಆಗಲಿದೆ.

ರಾಜ್ಯದಲ್ಲಿ 1.20 ಕೋಟಿಗೂ ಅಧಿಕ ಮಂದಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ 2,000 ರೂ. ಪಡೆಯುತ್ತಿದ್ದು, ಇನ್ಮುಂದೆ ರಾಜ್ಯದ 40 ಸಾವಿರಕ್ಕೂ ಹೆಚ್ಚು ತೃತೀಯ ಲಿಂಗಿಗಳ ಖಾತೆಗೂ ಗೃಹ ಲಕ್ಷ್ಮಿ ಹಣ ಖಾತೆಗೆ ಜಮಾ ಆಗಲಿದೆ.

Tags :
ತೃತೀಯ ಲಿಂಗಿಗಳಿಗೆ ಗುಡ್ ನ್ಯೂಸ್ .! ಗೃಹಲಕ್ಷಿ ಯೋಜನೆಯಲ್ಲಿ ಹಣ ಜಮೆ.!
Advertisement
Next Article