ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತೆರಿಗೆ ವಿಚಾರವಾಗಿ ಕಾಂಗ್ರೆಸ್ ಮೇಲೆ ಬಲವಂತದ ಕ್ರಮ ಇಲ್ಲ ಎಂದ ಐಟಿ

04:59 PM Apr 01, 2024 IST | Bcsuddi
Advertisement

ನವದೆಹಲಿ: ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾವು ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಅಧಿಕಾರಿಗಳು ಹೇಳಿದ್ದಾರೆ.

Advertisement

ಸುಮಾರು 3,500 ಕೋಟಿ ರೂ.ಗಳ ತೆರಿಗೆ ಬೇಡಿಕೆ ನೋಟಿಸ್‌ಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮೇಲೆ ಬಲವಂತದ ಕ್ರಮ ಇಲ್ಲ ಎಂದು ಐಟಿ ಅಧಿಕಾರಿಗಳು ಸೋಮವಾರ ಸುಪ್ರೀಮ್ ಕೋರ್ಟ್‌ಗೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಮಾಹಿತಿಯನ್ನ ನ್ಯಾಯಾಲಯಕ್ಕೆ ನೀಡಿದ್ದಾರೆ. ಕಾಂಗ್ರೆಸ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಅವರು ಸರ್ಕಾರದ ಈ ಧೋರಣೆಯನ್ನ ಉದಾರವಾದಿ ಎಂದು ಬಣ್ಣಿಸಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆ ಜುಲೈ 28ರಂದು ನಡೆಯಲಿದೆ.

Advertisement
Next Article