ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭಾರೀ ಮುನ್ನಡೆ: ಕೈ ಪಡೆಗೆ ಒಲಿದ ಮೊದಲ ಗೆಲುವು

12:19 PM Dec 03, 2023 IST | Bcsuddi
Advertisement

ತೆಲಂಗಾಣ: ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆದಿನಾರಾಯಣ ಜಯ ಗಳಿಸಿದ್ದಾರೆ. ಅಶ್ವರಾವುಪೇಟ ಕ್ಷೇತ್ರದಲ್ಲಿ ಸುಮಾರು 28 ಸಾವಿರ ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ.

Advertisement

ಇನ್ನೊಂದೆಡೆ ತೆಲಂಗಾಣದಲ್ಲಿ 119 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ಪಕ್ಷ ಅರ್ಧಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್‌ಗೆ ಭಾರೀ ಮುನ್ನಡೆ ಸಾಧಿಸುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದು, ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ನಿವಾಸದಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಕಾರ್ಯಕರ್ತರು ಸಿಹಿ ಹಂಚುತ್ತಿದ್ದಾರೆ.

ತೆಲಂಗಾಣದಲ್ಲಿ ಒಟ್ಟು 119 ಸ್ಥಾನಗಳಿದ್ದು ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದೆ. ತೆಲಂಗಾಣದಲ್ಲಿ 2018 ರ ಚುನಾವಣೆಯಲ್ಲಿ ಬಿಆರ್‌ಎಸ್‌ 88 ಸೀಟ್‌ಗಳನ್ನು ಗೆದ್ದಿತ್ತು.

Advertisement
Next Article