ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದ ಹೆಚ್ ಡಿ ಕೆ ಮಾತು ತಪ್ಪಿದ್ರಾ ?

09:53 AM Dec 26, 2023 IST | Bcsuddi
Advertisement

ಚಿಕ್ಕಮಗಳೂರು: ಜೆಡಿಎಸ್‌-ಬಿಜೆಪಿ ಮೈತ್ರಿ ಖಚಿತವಾದ ಬೆನ್ನಲ್ಲಿಯೇ ಚಿಕ್ಕಮಗಳೂರಿನ ದತ್ತಪೀಠಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದು ದತ್ತಮಾಲೆ ಧರಿಸಲು ನಾಳೆ ಕೊನೆಯ ದಿನವಾಗಿದ್ದು ಇಲ್ಲಿಯ ವರೆಗೆ ಕುಮಾರಸ್ವಾಮಿ ಆಗಮಿಸಲಿಲ್ಲ ಆದ್ದರಿಂದ ಕುಮಾರಸ್ವಾಮಿ ದತ್ತಮಾಲೆ ಹಾಕುತ್ತಾರಾ ಇಲ್ಲವೇ ಎಂಬ ಪ್ರಶ್ನೆ ಶುರುವಾಗಿದೆ.

Advertisement

ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯೊಂದಿಗೆ ಜೆಡಿಎಸ್‌ ಪಕ್ಷವನ್ನು ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಖಚಿತಗೊಂಡ ಬೆನ್ನಲ್ಲಿಯೇ ಮಾಜಿ ಸಿಎಂ ಕುಮಾರಸ್ವಾಮಿ ದತ್ತಪೀಠಕ್ಕೆ ಭೇಟಿ ನೀಡಿದಾಗ ತಾವು ದತ್ತಮಾಲೆ ಧರಿಸುವುದಾಗಿ ಬಹಿರಂಗ ಘೋಷಣೆ ಮಾಡಿದ್ದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಮಯ ಬಂದ್ರೆ ದತ್ತಮಾಲೆ ಹಾಕುತ್ತೇನೆ ಎಂಬ ಹೇಳಿಕೆಯನ್ನು ಬಜರಂಗದಳ, ವಿಶ್ವಹಿಂದು ಪರಿಷತ್ ಸ್ವಾಗತಿಸಿತ್ತು. ಬಜರಂಗದಳ, ವಿಶ್ವಹಿಂದು ಪರಿಷತ್‌ನಿಂದ ಆಹ್ವಾನವನ್ನೂ ನೀಡಿತ್ತು ಎನ್ನಲಾಗುತ್ತಿದೆ. ವಿಶ್ವಹಿಂದು ಪರಿಷತ್ ಬಜರಂಗದಳದ ನೇತೃತ್ವದಲ್ಲಿ ಡಿಸೆಂಬರ್ 17 ರಿಂದ 26 ರವರೆಗೂ ನಡೆಯುಲಿರುವ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು, ನಾಳೆ ದತ್ತಮಾಲಾಧಾರಣೆಗೆ ಕೊನೆಯ ದಿನವಾಗಿದ್ದು ಆದರೂ ಇಲ್ಲಿಯವರೆಗೂ ಕುಮಾರ ಸ್ವಾಮಿ ದತ್ತಮಾಲೆ ಹಾಕದಿರುದರಿಂದ ಜನರಲ್ಲಿ ವಿವಿಧ ರೀತಿಯ ಪ್ರಶ್ನೆಗಳು ಕಾಡಿವೆ.

Advertisement
Next Article