For the best experience, open
https://m.bcsuddi.com
on your mobile browser.
Advertisement

ದರ ಏರಿಕೆ ಹಿನ್ನೆಲೆ ಕಡಿಮೆ ಬೆಲೆಗೆ ಈರುಳ್ಳಿ ಮಾರಾಟಕ್ಕೆ ಮುಂದಾದ ಕೇಂದ್ರ

06:28 PM Sep 05, 2024 IST | BC Suddi
ದರ ಏರಿಕೆ ಹಿನ್ನೆಲೆ ಕಡಿಮೆ ಬೆಲೆಗೆ ಈರುಳ್ಳಿ ಮಾರಾಟಕ್ಕೆ ಮುಂದಾದ ಕೇಂದ್ರ
Advertisement

ನವದೆಹಲಿ: ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರಿಕೆ ಹಿನ್ನೆಲೆ ಇದೀಗ ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಮಾರಾಟಕ್ಕೆ ಮುಂದಾಗಿದೆ.

ಗ್ರಾಹಕರ ಮೇಲಿನ ಹೊರೆ ಕಡಿಮೆ ಮಾಡಲು ಈರುಳ್ಳಿಯನ್ನು ವಾಹನಗಳ ಮೂಲಕ ಮಾರಾಟ ಮಾಡಲಾಗುವುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ದೆಹಲಿಯ ಕೃಷಿ ಭವನದಲ್ಲಿ ಈರುಳ್ಳಿ ಚಿಲ್ಲರೆ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಚಿಲ್ಲರೆ ಅಂಗಡಿಗಳ ಮೂಲಕ ಈರುಳ್ಳಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಪ್ರತಿ ಕಿಲೋಗ್ರಾಂಗೆ 35 ರೂ. ಸಬ್ಸಿಡಿ ದರದಲ್ಲಿ ಈರುಳ್ಳಿಯನ್ನು ಮಾರಾಟ ಮಾಡಲಾಗುತ್ತದೆ ಎಂದು ತಿಳಿಸಿದರು.

Advertisement

ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಈ ಕಾರ್ಯಕ್ರಮವನ್ನು ನಿಯೋಜಿಸಲಾಗಿದೆ. ಈರುಳ್ಳಿ ಖರೀದಿ ಮಾಡಿ ಸಂಗ್ರಹಿಸಿ, ಅದನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement