ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಸಂಸದ ಗೋವಿಂದ ಎಂ ಕಾರಜೋಳ.!

08:00 AM Jul 12, 2024 IST | Bcsuddi
Advertisement

ಚಿತ್ರದುರ್ಗ : ಭರಮಸಾಗರ-ಚಿತ್ರದುರ್ಗ ಮಧ್ಯದ 29 ಕಿ.ಮೀ ಉದ್ದದ ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದ್ದು, ಭೂಮಿ ಹಸ್ತಾಂತರ ಮಾಡಲಾಗಿದೆ. ಕಾಮಗಾರಿಯ ಟೆಂಡೆರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರವೇ ರಾಜ್ಯದವರೇ ಆದ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಸದ ಗೋವಿಂದ ಎಂ ಕಾರಜೋಳ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಜಿಲ್ಲೆ ಅಗತ್ಯವಾಗಿದೆ. ಯೋಜನೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಒಟ್ಟು 1210 ಎಕೆರೆ ಭೂಮಿ ಅವಶ್ಯಕವಾಗಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆ ನೀಡಲಾಗಿದೆ. ಬಾಕಿ ಇರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯ ಅಂತಿಮ ಹಂತದಲ್ಲಿದೆ. ಯೋಜನೆ ವಿಳಂಭವಾಗದAತೆ ರೈಲ್ವೇ ಕಾಮಗಾರಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಹಾಗೂ ರೈಲ್ವೇ ಇಲಾಖೆಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಮಾಡುವಂತೆ ಸಂಸದ ಗೋವಿಂದ ಎಂ ಕಾರಜೋಳ ಭೂಸ್ವಾಧೀನಾಧಿಕಾರಿಗಳಿಗೆ ಸೂಚಿಸಿದರು.

Tags :
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಸಂಸದ ಗೋವಿಂದ ಎಂ ಕಾರಜೋಳ.!
Advertisement
Next Article