For the best experience, open
https://m.bcsuddi.com
on your mobile browser.
Advertisement

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ,- ಪ್ರಧಾನಿ ಮೋದಿಗೆ ಸಿದ್ದು ಸವಾಲು

10:14 AM Sep 26, 2024 IST | BC Suddi
ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ  ನೇರಾನೇರ ಚರ್ಚೆಗೆ ಬನ್ನಿ   ಪ್ರಧಾನಿ ಮೋದಿಗೆ ಸಿದ್ದು ಸವಾಲು
Advertisement

ಬೆಂಗಳೂರು : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಹರಿಯಾಣದ ಚುನಾವಣಾ ಪ್ರಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. ಅಧಿಕಾರಕ್ಕೆ ಬಂದು ಎರಡೇ ವರ್ಷದಲ್ಲಿ ಸಿದ್ದರಾಮಯ್ಯ ಮೇಲೆ ಭೂ ಹಗರಣ ಇದೆ ಎಂದೆಲ್ಲ ಮೋದಿ ಭಾಷಣದಲ್ಲಿ ಆರೋಪಿಸಿದ್ದರು. ಪಿಎಂ ಆರೋಪಕ್ಕೆ ಪತ್ರಿಕಾ ಪ್ರಕಟಣೆ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ ಮೋದಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ, ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ? ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

Author Image

Advertisement