ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದೇವಾಲಯದ ಅವಶೇಷಗಳ ಮೇಲೆ ಜ್ಞಾನವಾಪಿ ಮಸೀದಿ ನಿರ್ಮಾಣ: ವಕೀಲ ಶಂಕರ್ ಜೈನ್

09:41 AM Jan 26, 2024 IST | Bcsuddi
Advertisement

ಲಕ್ನೋ: ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಬಗ್ಗೆ ವೈಜ್ಞಾನಿಕ ಸಮೀಕ್ಷಾ ವರದಿ ಬಹಿರಂಗವಾಗಿದ್ದು, ಮಸೀದಿ ಜಾಗದಲ್ಲಿ ಈ ಹಿಂದೆ ಹಿಂದೂ ದೇವಾಲಯ ಇತ್ತು ಎಂದು ಪುರಾತತ್ವ ಸರ್ವೇಕ್ಷಣಾ ವರದಿ ಹೇಳಿದೆ.

Advertisement

ಹಿಂದೂ ಪರ ವಕೀಲ ವಿಷ್ಣು ಶಂಕರ್‌ ಜೈನ್‌ ವರದಿಯನ್ನು ಬಹಿರಂಗಪಡಿಸಿದ್ದು,ಮೊದಲೇ ಅಸ್ತಿತ್ವದಲ್ಲಿರುವ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ ಎಂದು ಅವರು ಗುರುವಾರ ಹೇಳಿದ್ದಾರೆ.

839 ಪುಟಗಳ ಸಮೀಕ್ಷಾ ವರದಿಯ ಪ್ರತಿಗಳನ್ನು ಗುರುವಾರ ತಡರಾತ್ರಿ ನ್ಯಾಯಾಲಯವು ಸಂಬಂಧಪಟ್ಟ ಕಕ್ಷಿದಾರರಿಗೆ ನೀಡಿದೆ ಎಂದು ಜೈನ್ ಹೇಳಿದ್ದಾರೆ

ದೇವಸ್ಥಾನವನ್ನು ಕೆಡವಿದ ಅವಶೇಷಗಳ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ. ಸಮೀಕ್ಷೆಯು ಪ್ರಸ್ತುತ ರಚನೆಗಿಂತ ಹಿಂದಿನ ದೊಡ್ಡ ಹಿಂದೂ ದೇವಾಲಯದ ರಚನೆಯನ್ನು ಎತ್ತಿ ತೋರಿಸಿದ್ದು, ಜನಾರ್ದನ, ರುದ್ರ ಮತ್ತು ವಿಶ್ವೇಶ್ವರ ಮುಂತಾದ ಮೂರು ದೇವತೆಗಳ ಹೆಸರು ಈ ಶಾಸನಗಳಲ್ಲಿ ಕಂಡುಬರುತ್ತವೆ. ಮಸೀದಿ ಪಶ್ಚಿಮ ಗೋಡೆ ಈ ಹಿಂದೆ ನಿರ್ಮಾಣ ಮಾಡಿದ್ದ ಹಿಂದೂ ದೇವಾಲಯವಾಗಿದ್ದು, 17ನೇ ಶತಮಾನದಲ್ಲಿ ಈ ಮಂದಿರವನ್ನು ನಾಶ ಮಾಡಲಾಗಿದೆ ಎಂದಿದ್ದಾರೆ.

Advertisement
Next Article