ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ'- ವೀರಪ್ಪ ಮೊಯ್ಲಿ

03:58 PM May 02, 2024 IST | Bcsuddi
Advertisement

ಬೆಳಗಾವಿ: ದೇವೇಗೌಡರ ಕುಟುಂಬದ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ವಾಗ್ದಾಳಿ ನಡೆಸಿದರು.

Advertisement

ಬೆಳಗಾವಿಯಲ್ಲಿ ಮಾತನಾಡಿದ ಅವರು, ದೇವಗೌಡರ ಮಗ, ಮೊಮ್ಮಗನಿಂದ ಒಂದಲ್ಲ 2 ಸಾವಿರ ಮಹಿಳೆಯರ ಮೇಲೆ ದೌರ್ಜನ್ಯವಾಗಿದೆ. ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಸಿದ್ದಾರೆ, ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ನಾರಿಶಕ್ತಿ, ಬೇಟಿ ಪಡಾವೋ, ಬೇಟಿ ಬಚಾವೋ ಅಂತಾರೆ. ಭಾರತ ಸರ್ಕಾರದ ಬಳಿಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಮಾಹಿತಿ ಇದೆ. ಯುಪಿಎ ಸಮಯದಲ್ಲಿ ಮೂರು ಲಕ್ಷ ಮಹಿಳೆಯರ ಮೇಲೆ ದೌರ್ಜನ್ಯ ಆಗ್ತಿತ್ತು. ಈಗ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ 22 ಲಕ್ಷ ದಾಟಿದೆ ಎಂದು ಕಿಡಿಕಾರಿದರು.

ಪ್ರಜ್ವಲ್ ಸೆಕ್ಸ್ ಸ್ಕ್ಯಾಂಡಲ್‌ನ ಎಲ್ಲ ಸೂತ್ರದಾರರು ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮಲಗಿದ್ದಾರೆಯೇ? ಇಂಥ ಕೃತ್ಯ ಎಸಗಿ, ಹಣದೋಚಿಕೊಂಡು ದೇಶದಿಂದ ಪರಾರಿ ಆಗ್ತಿದ್ದಾರೆ. ಕೇಂದ್ರದಲ್ಲಿ ಇಂಥ ಸರ್ಕಾರ ಇದ್ದರೆ ಏನು ಪ್ರಯೋಜನ ಎಂದು ಮೊಯ್ಲಿ ಆಕ್ರೋಶ ಹೊರಹಾಕಿದರು.

Advertisement
Next Article